ದಿನದ ಸುದ್ದಿ

ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿ : ವಿಶೇಷ ಆರ್ಥಿಕ ಪ್ಯಾಕೇಜ್ ನಿರೀಕ್ಷೆ..!?

Published

on

ಸುದ್ದಿದಿನ,ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರೊಂದಿಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ | ಚಾಮರಾಜನಗರ ಆಕ್ಸಿಜನ್ ದುರಂತ | ಡಿಸಿ ರೋಹಿಣಿ‌ ಸಿಂಧೂರಿಗೆ ಹೈಕೋರ್ಟ್ ಕ್ಲೀನ್ ಚಿಟ್ : ವರದಿಯಲ್ಲೇನಿದೆ..?

ಅಲ್ಲದೇ ನಿನ್ನೆ ನಡೆದ ಸಭೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ತಾತ್ಕಾಲಿಕ ಸ್ಥಗಿತ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಲಸಿಕೆ ಯಾವಾಗ ಪ್ರಾರಂಭವಾಗಲಿದೆ ಎಂಬ ಬಗ್ಗೆಯೂ ಅಧಿಕೃತವಾಗಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version