ದಿನದ ಸುದ್ದಿ

ಪ್ರಸಕ್ತ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ : ಈ ವರ್ಷ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ

Published

on

ಸುದ್ದಿದಿನ ಡೆಸ್ಕ್ : ಪ್ರಸಕ್ತ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಈ ವರ್ಷ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಆದರೆ ಈ ವರ್ಷ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ.

270ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲಿಡಲಾಗಿದ್ದು, ದಸರಾಗೆ 14 ದಿನ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಇಲಾಖೆ ಈ ಬಾರಿ ಹಮ್ಮಿಕೊಂಡಿದೆ.

ವಿಶ್ವೇಶ್ವರಯ್ಯ ದಿನಾಚರಣೆ, ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ, ಕನಕದಾಸರ ಜಯಂತಿ, ಸಂವಿಧಾನ ದಿನಾಚರಣೆ, ವಿವೇಕಾನಂದ ಜಯಂತಿ ದಾರ್ಶನಿಕರ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿದೆ.

ಮೇ 16ರಿಂದ ಶಾಲೆಗಳು ಆರಂಭ- ಮೇ16ರಿಂದ 20ರವರೆಗೆ ದಾಖಲಾತಿ ಪ್ರಕ್ರಿಯೆ. ಮೇ 17ರಿಂದ 31ವರೆಗೆ ಕಲಿಕಾ ಚೇತರಿಕೆ ಕಾರ್ಯಕ್ರಮ. ಮೇ 28ಪೋಷಕರ ಸಭೆ. ಅಕ್ಟೋಬರ್3 ರಿಂದ 16ದಸರಾ ರಜೆ. ಅಕ್ಟೋಬರ್ 17ರಿಂದ 25 ಅರ್ಧ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version