ದಿನದ ಸುದ್ದಿ
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ ; ಆದರೆ..!?
ಸುದ್ದಿದಿನ, ಶಿವಮೊಗ್ಗ: ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಪರಿಶ್ರಮವೂ ಕಾರಣವಾಗಿದೆ ಎಂದು ಶ್ಲಾಘಿಸಿದ ಅವರು, ಷಡಾಕ್ಷರಿ ಅವರ ಹಿಂದಿನ ಧೀಶಕ್ತಿ ಯಡಿಯೂರಪ್ಪನವರು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243