/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ದಾವಣಗೆರೆ |’ಗ್ರಾಹಕರೆಡೆಗೆ ಒಂದು ಹೆಜ್ಜೆ’ ; ಅಕ್ಟೋಬರ್ 4ರಿಂದ ‘ಗ್ರಾಹಕ ಮೇಳ’

Published

on

ಸುದ್ದಿದಿನ,ದಾವಣಗೆರೆ : ಕೆನರಾ ಬ್ಯಾಂಕ್, ಲೀಡ್ ಬ್ಯಾಂಕ್ ಕಚೇರಿ ದಾವಣಗೆರೆ ಇವರ ವತಿಯಿಂದ ಗ್ರಾಹಕರೆಡೆಗೆ ಒಂದು ಹೆಜ್ಜೆ…‘ಗ್ರಾಹಕರ ಮೇಳ’ ಕುರಿತು ಅ. 4, 5 ಮತ್ತು 06 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಾವಣಗೆರೆಯ ಎಂ.ಸಿ.ಸಿ. ‘ಎ’ ಬ್ಲಾಕ್‍ನಲ್ಲಿರುವ ತೋಗಟವೀರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.

ಗ್ರಾಹಕರ ಮೇಳದ ಉದ್ಘಾಟನೆಯನ್ನು ಅ. 4 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇವರು ನೆರವೇರಿಸಲಿದ್ದಾರೆ. ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಎನ್. ಲಕ್ಷ್ಮೀನಾರಾಯಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ದಾವಣಗೆರೆ ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ, ನಬಾರ್ಡ್ ಜಿಲ್ಲಾ ಮುಖ್ಯ ವ್ಯವಸ್ಥಾಪಕ ರವೀಂದ್ರ.ವಿ, ಎಸ್.ಬಿ.ಐ ರೀಜನಲ್ ಮ್ಯಾನೇಜರ್ ರಾಜೇಶ್.ಡಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ರೀಜನಲ್ ಮ್ಯಾನೇಜರ್ ಶಂಕರ್ ಕನವಳ್ಳಿ, ಸಿಂಡಿಕೇಟ್ ಬ್ಯಾಂಕ್ ರೀಜನಲ್ ಮ್ಯಾನೇಜರ್ ನವೀನ್‍ಕುಮಾರ್. ಎನ್, ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕ ಸುಶೃತ ಡಿ. ಶಾಸ್ತ್ರಿ ಇವರು ಪಾಲ್ಗೊಳ್ಳುವರು.

ಪತ್ರಿಕಾ ಗೋಷ್ಠಿ

ಸಮಾರಂಭದ ಉದ್ಘಾಟನಾ ಕಾರ್ಯಕ್ರಮದ ನಂತರ ಕೆನರಾ ಬ್ಯಾಂಕಿನ ಮಹಾ ಪ್ರಬಂಧಕರಾದ ಎನ್ ಲಕ್ಷ್ಮೀನಾರಾಯಣ ಇವರು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಆಯೋಜನೆಗೊಂಡಿರುವ ಈ ಕಾರ್ಯಕ್ರಮದ ಕುರಿತು ಪತ್ರಿಕಾ ಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version