ದಿನದ ಸುದ್ದಿ
ಬಿಜೆಪಿಯಿಂದ ಕನ್ನಡ ಚಿತ್ರರಂಗಕ್ಕೆ ಮಸಿ; ದಾವಣಗೆರೆಯಲ್ಲಿ ಡಿ.ಬಸವರಾಜ್ ಕಿಡಿ
ದಾವಣಗೆರೆ: ಉತ್ತಮ ಆಡಳಿತ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ವೈಫಲ್ಯ ಮುಚ್ಚಿಕೊಳ್ಳಲು ರಾಗಿಣಿ, ಸಂಜನಾ ಹಾಗೂ ಕಂಗನಾ ಮೊರೆ ಹೋಗಿವೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಿ.ಬಸವರಾಜ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕನ್ನಡ ಚಿತ್ರರಂಗಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಡ್ರಗ್ಸ್ ಮಾಫಿಯಾ ಪ್ರಕರಣವನ್ನು ಇಡೀ ಚಿತ್ರರಂಗದ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದೆ. ತಮ್ಮ ಆಡಳಿದ ವೈಫಲ್ಯ ಮುಚ್ಚಿಕೊಳ್ಳಲು ರಾಗಿಣಿ, ಸಂಜನಾ ಹಾಗೂ ಕಂಗನಾ ಮೊರೆ ಹೋಗಿದೆ ಎಂದು ಆರೋಪ ಮಾಡಿದರು.
ಬಿಜೆಪಿ ಸಚಿವರು ಹಾಗೂ ಶಾಸಕರ 62 ಕ್ರಿಮಿನಲ್ ಕೇಸ್ ರದ್ದು ಪಡಿಸಿರುವ ರಾಜ್ಯ ಸರ್ಕಾರ ಈಗ ಡ್ರಗ್ಸ್ ಪ್ರಕರಣದಲ್ಲಿ ಇಡೀ ಕನ್ನಡ ಚಿತ್ರರಂಗದ ಮೇಲೆ ಆರೋಪ ಹೊರಿಸುವ ಕೆಲಸ ಮಾಡುತ್ತಿದೆ. ದೇಶದ ಆರ್ಥಿಕತೆ ಹದಗೆಟ್ಟಿದೆ. ನಿರುದ್ಯೋಗ ಹೆಚ್ಚಾಗಿದೆ. ಆದರೆ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿವೆ ಎಂದು ದೂರಿದರು.