Connect with us

ದಿನದ ಸುದ್ದಿ

ತೇಜಸ್ವಿ ಸೂರ್ಯ ಅವರೇ “ಬಡವರ ಸ್ವಾಭಿಮಾನ ಕೆಣಕಲು ಹೋಗಬೇಡಿ” : ಡಿ.ಕೆ.‌ಶಿವಕುಮಾರ್ ಎಚ್ಚರಿಕೆ

Published

on

ಸುದ್ದಿದಿನ,ಬೆಂಗಳೂರು: ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಡಿಕೆ ಶಿವಕುಮಾರ್ ಅವರು, ಬಡವ ಪಂಚರ್ ಹಾಕುತ್ತಿದ್ದಾನೆ, ಕಸ ಗುಡಿಸುತ್ತಿದ್ದಾನೆ, ಕ್ಲೀನಿಂಗ್ ಮಾಡುತ್ತಿದ್ದಾನೆ. ಆದರೆ ಕಳ್ಳತನ ಮಾಡಿಲ್ಲ, ದೇಶದ್ರೋಹ ಮಾಡಿಲ್ಲ. ನೀವು ಅವರಿಗೆ ವಿದ್ಯಾಭ್ಯಾಸ ಕೊಡಿ, ಕೆಲಸ ಕೊಡಿ. ಯಾವುದೇ ಕಾರಣಕ್ಕೂ ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ನಗರ ಟೌನ್‍ಹಾಲ್ ಎದುರು ಸಿಎಎ ಪರ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ತೇಜಸ್ವಿ ಸೂರ್ಯಗೆ ದಲಿತರು, ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಕೆಂಡಾಮಂಡಲರಾದರು.

ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಬೆಂಗಳೂರಿನ ಐಟಿ ಸೆಕ್ಟರ್ ನಲ್ಲಿ, ಬಿಟಿ ಸೆಕ್ಟರ್ ನಲ್ಲಿ ಕೆಲಸ ಮಾಡುತ್ತಿರುವಂತಹ, ದೇಶದ ಆರ್ಥಿಕತೆಗೆ ಕೊಡುಗೆ ನೀಡುವಂತಹ, ವಕೀಲರು ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿರುವವರು, ಸಾಮಾನ್ಯ ಕೆಲಸ ಮಾಡುತ್ತಿರುವ ಆಟೋ ಚಾಲಕರು ಎಲ್ಲರೂ ಸೇರಿದ್ದಾರೆ. ಎದೆ ಸೀಳಿದ್ರೆ ಎರಡು ಅಕ್ಷರ ಇರಲ್ಲ, ಬರೀ ಪಂಕಚ್ಚರ್ ಅಂಗಡಿ ಹಾಕಿಕೊಂಡಿವವರು ಇಲ್ಲಿ ಸೇರಿಲ್ಲ ಎಂದು ವ್ಯಂಗ್ಯವಾಡಿದ್ದರು.

ಭಾಷಣ ಮಾಡುವವರು ಬಂದು ಕಸ ಕೂಡಿಸುವುದಿಲ್ಲ. ಪಂಚರ್ ಹಾಕುವವ ಇದ್ದರೇನೆ ಜನ ಸಾಮಾನ್ಯರು ಕೆಲಸ ಮಾಡಲು ಸಾಧ್ಯ. ಕಸ ಗೂಡಿಸುವವ, ಪಂಚರ್ ಹಾಕುವವ ನಿರುದ್ಯೋಗಿಯಾಗದೆ ಕೆಲಸ ಮಾಡುತ್ತಿದ್ದಾರೆ. ಮಾನವೀಯ ಕೆಲಸ ಮಾಡುವವರು ಇಲ್ಲದಿದ್ದರೆ ಜನರು ಬದುಕಲು ಸಾಧ್ಯವಿಲ್ಲ. ನೀವೂ ಅವರಿಗೆ ಶಿಕ್ಷಣ ನೀಡಲಿಲ್ಲ, ಸರಿಯಾದ ಉದ್ಯೋಗ ನೀಡಿಲ್ಲ ಎಂದು ತೇಜಸ್ವಿ ಸೂರ್ಯ ಅವರ ಹೆಸರನ್ನು ಪ್ರಸ್ತಾಪ ಮಾಡದೆ ಕಿಡಿಕಾರಿದರು.

ಟೌನ್‍ಹಾಲ್ ಎದುರು ನಡೆದ ಸಿಎಎ ಪರ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ಇಲ್ಲಿ ಸೇರಿರುವವರೆಲ್ಲರೂ ಈ ಕಾನೂನು ಏನು..? ಈ ಕಾನೂನಿಂದ ದೇಶಕ್ಕೆ ಏನು ಸಹಾಯ ಆಗುತ್ತೆ? ಈ ಕಾನೂನು ಜಾರಿಯಾಗುವುದರಿಂದ ದೇಶದ ಒಳಿತು ಹೇಗೆ ಆಗುತ್ತೆ? ಅಂತ ತಿಳಿದುಕೊಂಡಿರುವ ವಿದ್ಯಾಂತರಾಗಿದ್ದಾರೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending