ರಾಜಕೀಯ
ದಲಿತ ದೌರ್ಜನ್ಯ ತಡೆ ಕಾಯಿದೆ ದುರ್ಬಲ ; ರಾಜ್ಯವ್ಯಾಪಿ ಹೋರಾಟ | ಡಿ.ಎಸ್. ವೀರಯ್ಯ

ಸುದ್ದಿದಿನ, ಬೆಂಗಳೂರು | ಮೈತ್ರಿ ಸರ್ಕಾರ ಸಂಪೂರ್ಣ ವಾಗಿ ದಲಿತ ವಿರೋಧಿಯಾಗಿದೆ. ದಲಿತರಿಗೆ ದ್ರೋಹ ಬಗೆಯುತ್ತಿದ್ದಾರೆ. ಸಿದ್ದರಾಮಯ್ಯ ದಲಿತ, ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರ ನಡೆಸಿದ್ರು.ಈಗ ಮತ್ತೆ ಜೆ ಡಿಎಸ್ ಗೆ ಬೆಂಬಲ ಕೊಟ್ಟಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಎಸ್ ಮೋರ್ಚಾ ಅಧ್ಯಕ್ಷ ಎಸ್ ಎಸ್ ವೀರಯ್ಯಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇದ್ದಾಗ ಒಬ್ಬ ನೌಕರ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದ.ಆದರೆ ಕೋರ್ಟ್ ನಲ್ಲಿ ಸರಿಯಾಗಿ ವಾದ ಮಂಡಿಸದೆ ದಲಿತರ ವಿರೋಧಿ ಯಾಗಿ ತೀರ್ಪು ನೀಡಿತ್ತು. ಹೀಗಾಗಿ ಸುಗ್ರೀವಾಜ್ಞೆ ತಂದ್ರು, ಅದು ರಾಷ್ಟ್ರಪತಿ ಬಳಿ ಹೋಯ್ತು. ಅವರು ಅಧಿಕಾರಿಗಳಿಂದ ಶಿಪಾರಸ್ಸು ಪಡೆದುಕೊಂಡರು.
ನಾವು ನಮ್ಮ ನಾಯಕ ಕಡೆಯಿಂದಲೂ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತು. ರಾಷ್ಟ್ರಪತಿಯವರು ಅದಕ್ಕೆ ಅಂಕಿತ ಹಾಕಿದ್ರು. ಆದ್ರೆ ರಾಜ್ಯ ಸರ್ಕಾರ ಆ ಬಗ್ಗೆ ಈ ವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಇದು ದಲಿತ ವಿರೋಧಿ ಸರ್ಕಾರ ಎಂದು ಡಿ ಎಸ್ ವೀರಯ್ಯ ವಾಗ್ದಾಳಿ ನಡೆಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆ ಕಾಯಿದೆಯನ್ನೂ ಕೋರ್ಟ್ ದುರ್ಬಲಗೊಳಿಸಿತು. ಆದ್ರೆ ಕೂಡಲೆ ಮೋದಿ ಅವರು ಸುಗ್ರೀವಾಜ್ಞೆ ತಂದು ದಲಿತರ ಹಿತ ಕಾಯೋ ಕೆಲಸ ಮಾಡಿದ್ರು.ಕೆವಲ 15 ದಿನಗಳಲ್ಲಿ ನಿರ್ಧಾರ ತೆಗೆದುಕೊಂಡ್ರು. ಆದ್ರೆ ಆ ಬಗ್ಗೆ ಕಾಂಗ್ರೆಸ್ ತುಟಿ ಬಿಚ್ಚಲಿಲ್ಲ, ಕೇಂದ್ರ ಸರ್ಕಾರ ಏನು ಮಾಡುತ್ತೋ ನೋಡೋಣ ಅಂತ ಕಾಯುತ್ತಿದ್ರು. ಇದು ಕಾಂಗ್ರೆಸ್ ನ ದಲಿತ ವಿರೋಧಿ ಅಂತ ಸಾಬೀತು ಮಾಡಿದೆ. ರಾಜ್ಯ ಸರ್ಕಾರ ಈ ಕೂಡಲೆ ರಾಷ್ಟ್ರಪತಿಗಳು ಹಾಕಿರುವ ಅಂಕಿತ ಜಾರಿ ಮಾಡಬೇಕು. ಇಲ್ಲ ಅಂದ್ರೆ ರಾಜ್ಯ ವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
