ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಇನ್ನೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಅವರೂ ಸಹ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೆಡಿಎಸ್ ಸಹ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
  2. ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಭಾಗವಹಿಸಿ ಫಲನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆಯಾ ರಾಜ್ಯದ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ನಡೆಯಲಿದೆ. 21 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು 10ಕೋಟಿ ರೈತ ಸಮುದಾಯಕ್ಕೆ ವರ್ಗಾವಣೆ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.
  3. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಭಗವಂತ್ ಕೂಬ, ಬೀದರ್‌ನ ಡಾ.ಚನ್ನಬಸವೇಶ್ವರ ಪಟ್ಟದೇವರು ರಂಗಮಂದಿರದಲ್ಲಿ, ಪ್ರಹ್ಲಾದ್ ಜೋಷಿ, ಧಾರವಾಡದಲ್ಲಿ, ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಿಂದ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
  4. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಸೋಮವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿಕುಮಾರ್ ಅವರನ್ನು ಸನ್ಮಾನಿಸಿದರು. ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸಂಪುಟದ ಸಹೋದ್ಯೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
  5. ಬೆಂಗಳೂರಿನ ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ರಾಜ್ಯಪಾಲ ಥಾವರ್‌ಚೆಂದ್ ಗೆಹ್ಲೋಟ್ ನಿನ್ನೆ ಅನಾವರಣ ಗೊಳಿಸಿದರು. ಏಪ್ರಿಲ್ 14ರಂದು ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ವಿಶ್ವ ಸಂಸ್ಥೆ ಘೋಷಿಸಿರುವುದು ಸ್ಮರಣೀಯ.
  6. ಬೆಂಗಳೂರಿನ ಕಂದಾಯ ಭವನದಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 10 ಲಕ್ಷ ರೂಪಾಯಿ ಠೇವಣಿ ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಪಿಎಂ ಕೇರ‍್ಸ್ ಅನುಮೋದಿತ ಮಕ್ಕಳಿಗೆ ಎಲ್ಲಾ ಸೌಲಭ್ಯ ಒದಗಿಸಲು ಪ್ರಧಾನಮಂತ್ರಿ ನೇತೃತ್ವದಲ್ಲಿ ವಿಡಿಯೋ ಸಂವಾದ ನಡೆಯಿತು.
  7. ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಭಾಗವಹಿಸಿ ಫಲನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆಯಾ ರಾಜ್ಯದ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ನಡೆಯಲಿದೆ. 21 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು 10 ಕೋಟಿ ರೈತ ಸಮುದಾಯಕ್ಕೆ ವರ್ಗಾವಣೆ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.
  8. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಭಗವಂತ್ ಕೂಬ, ಬೀದರ್‌ನ ಡಾ.ಚನ್ನಬಸವೇಶ್ವರ ಪಟ್ಟದೇವರು ರಂಗಮಂದಿರದಲ್ಲಿ, ಪ್ರಹ್ಲಾದ್ ಜೋಷಿ, ಧಾರವಾಡದಲ್ಲಿ, ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಿಂದ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
  9. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಇನ್ನೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಅವರೂ ಸಹ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೆಡಿಎಸ್ ಸಹ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
  10. ಕೇಂದ್ರದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಜನಪರ ಹಾಗೂ ಜನಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ದಾಪುಗಾಲು ಹಾಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 8 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಈ ವಿಷಯ ತಿಳಿಸಿದರು.
  11. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 8 ವರ್ಷಗಳು ಪೂರ್ಣಗೊಂಡಿದೆ. ಬಡವರ ಕಲ್ಯಾಣ, ಉತ್ತಮ ಆಡಳಿತ, ಸೇವೆಯ ಪರಿಕಲ್ಪನೆಗೆ ಒತ್ತು ನೀಡಿ, ಸರ್ಕಾರ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸರ್ಕಾರದ ಸೌಲಭ್ಯಗಳನ್ನು ಶೇಕಡ 100ರಷ್ಟು ಜನರಿಗೆ ತಲುಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಪರವಾಗಿ ಆಡಳಿತ ನಡೆಸುವುದಾಗಿ ಪ್ರಧಾನಮಂತ್ರಿ ಅವರು ಪ್ರಕಟಿಸಿದ್ದು, ಬಡವರಿಗಾಗಿ ಮೀಸಲಾಗಿರುವ ಕಾರ್ಯಕ್ರಮಗಳಲ್ಲಿ ಯಾವುದೇ ಫಲಾನುಭವಿ ಹೊರಗುಳಿಯಬಾರದು ಎಂದು ನೀಡಿದ್ದ ಹೇಳಿಕೆಯನ್ನು ಸಾಕಾರಗೊಳಿಸುವತ್ತ ಮುನ್ನಡೆಯುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version