ಕ್ರೀಡೆ
ಡ್ಯಾನಿಶ್ ಓಪನ್ ಈಜುಸ್ಪರ್ಧೆ | ಭಾರತದ ಸಾಜನ್ ಪ್ರಕಾಶ್ಗೆ ಚಿನ್ನ; ವೇದಾಂತ್ ಮಾಧವನ್ಗೆ ರಜತ ಪದಕ
ಸುದ್ದಿದಿನ ಡೆಸ್ಕ್ : ಡೆನ್ಮಾರ್ಕ್ನ ಕೂಪನ್ ಹೇಗನ್ನಲ್ಲಿ ನಡೆಯುತ್ತಿರುವ ಡೆನ್ಮಾರ್ಕ್ ಓಪನ್ ಈಜು ಕ್ರೀಡಕೂಟದಲ್ಲಿ ಭಾರತದ ಸಾಜನ್ ಪ್ರಕಾಶ್ 200 ಮೀಟರ್ ಬಟರ್ಫ್ಲೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಪುರುಷರ 1 ಸಾವಿರದ 500 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ವೇದಾಂತ ಮಾಧವನ್ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ವರ್ಷ ಮೊದಲ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಸಾಜನ್ ಪ್ರಕಾಶ್ ಒಂದು ನಿಮಿಷ 59.27 ಸೆಕೆಂಡ್ಗಳಲ್ಲಿ ಗುರಿ ತಲುಪಿ ಈ ಸಾಧನೆ ಮಾಡಿದ್ದಾರೆ.
ಇದಕ್ಕೂ ಮುನ್ನ ಅವರು 2 ನಿಮಿಷ 3.67 ಸೆಕೆಂಡ್ಗಳಲ್ಲಿ ಗುರಿ ತಲುಪಿ ಕ್ರೀಡಾಕೂಟಕ್ಕೆ ಅರ್ಹತೆ ಪಡೆದರು. ಈ ಮೂಲಕ ಅವರು ಒಲಿಂಪಿಕ್ ಎ ಸ್ಟ್ಯಾಂಡರ್ಡ್ ಟೈಮ್ನಲ್ಲಿ ಗುರಿ ತಲುಪಿದ ಭಾರತದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 16ವರ್ಷದ ವೇದಾಂತ ಮಹದೇವ್ ಫೈನಲ್ ತಲುಪಿದ್ದ 10ಮಂದಿ ಆಟಗಾರರ ಪೈಕಿ 15ನಿಮಿಷ57.86 ಸೆಕೆಂಡ್ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗಳಿಸಿದ್ದಾರೆ.
➡️ Sajan Prakash -🥇 in 200m Butterfly (1:59:27)
➡️ Vedaant Madhavan -🥈 in 1500m FS (15:57:86)Medals galore for India at the prestigious Danish Open Swimming Championships as the experienced/young duo of Sajan Prakash and Vedaant Madhavan bring glory!🔥#Swimming 🏊 pic.twitter.com/18J6ggev0W
— The Bridge (@the_bridge_in) April 16, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ2 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ4 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


