ದಿನದ ಸುದ್ದಿ

ನಮ್ಮ ತೆರಿಗೆ ಹಣದಲ್ಲಿ ‘ಹಿಂದಿ ದಿವಸ್’ ಆಚರಣೆ ಯೋಗ್ಯವಲ್ಲ : ನಟ ದರ್ಶನ್

Published

on

ಸುದ್ದಿದಿನ, ಬೆಂಗಳೂರು:ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ ಎಂದು ನಟ ತೂಗುದೀಪ ದರ್ಶನ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ.
ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು ಎಂದಿದ್ದಾರೆ.

ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ.
ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು ಎಂದು ಹೇಳಿದ್ದಾರೆ.

ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version