ದಿನದ ಸುದ್ದಿ

ದಾವಣಗೆರೆ 51.ಮಿಮೀ ಮಳೆ : ಹೀಗಿದೆ ಮಳೆ ವಿವರ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ :ಜಿಲ್ಲೆಯಲ್ಲಿ ಸೆ.08 ರಂದು 51.0 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಮಳೆ ವಿವರ

  1. ಚನ್ನಗಿರಿ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 46.0 ಮಿ.ಮೀ. ವಾಸ್ತವ ಮಳೆಯಾಗಿದೆ.
  2. ದಾವಣಗೆರೆ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 88.0 ಮಿ.ಮೀ. ವಾಸ್ತವ ಮಳೆಯಾಗಿದೆ.
  3. ಹರಿಹರ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 43.0 ಮಿ.ಮೀ. ವಾಸ್ತವ ಮಳೆಯಾಗಿದೆ.
  4. ಹೊನ್ನಾಳಿ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 32.0 ಮಿ.ಮೀ. ವಾಸ್ತವ ಮಳೆಯಾಗಿದೆ.
  5. ಜಗಳೂರು ತಾಲ್ಲೂಕಿನಲ್ಲಿ 1.0 ವಾಡಿಕೆಗೆ 43.0 ಮಿ.ಮೀ. ವಾಸ್ತವ ಮಳೆಯಾಗಿದೆ.
  6. ನ್ಯಾಮತಿ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 34.0 ಮಿ.ಮೀ. ವಾಸ್ತವ ಮಳೆಯಾಗಿದೆ.

ಜಿಲ್ಲೆಯಲ್ಲಿ ಸರಾಸರಿ 2.0 ವಾಡಿಕೆಗೆ 51.0 ಮಿ.ಮೀ ವಾಸ್ತವ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 20 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ.7.50 ಲಕ್ಷ ಹಾಗೂ 10 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು ರೂ.2 ಲಕ್ಷ ಒಟ್ಟು ರೂ.9.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಹರಿಹರ ತಾಲ್ಲೂಕಿನಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.20 ಸಾವಿರ ಹಾಗೂ 3 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.60 ಸಾವಿರ ಹಾಗೂ 300 ಎಕರೆ ಭತ್ತ ಬೆಳೆ ಹಾನಿಯಾಗಿದ್ದು ರೂ.15 ಲಕ್ಷ ಒಟ್ಟು ರೂ.15.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. 30 ಎಕರೆ ಭತ್ತದಗದ್ದೆಯಲ್ಲಿ ನೀರು ನಿಂತಿರುತ್ತದೆ.

ಹೊನ್ನಾಳಿ ತಾಲ್ಲೂಕಿನಲ್ಲಿ 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.2.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕಿನಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.25 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕಿನಲ್ಲಿ 5 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ.2 ಲಕ್ಷ ಹಾಗೂ 9 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ.3.80 ಲಕ್ಷ ಹಾಗೂ 5 ಎಕರೆ ಅಡಿಕೆ ಬಳೆ ಹಾನಿಯಾಗಿದ್ದು ರೂ.40 ಸಾವಿರ ಒಟ್ಟು ರೂ.6.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ.34.75 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version