ದಿನದ ಸುದ್ದಿ

ದಾವಣಗೆರೆ | ವಿಮಾನ ನಿಲ್ದಾಣ ಸ್ಥಳ ಪರಿಶೀಲನೆ ; 3 ವಾರದಲ್ಲಿ ವರದಿ ಸಲ್ಲಿಕೆ

Published

on

ಸುದ್ದಿದಿನ,ದಾವಣಗೆರೆ : ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.

ಹಾಲುರ‍್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಿ ದರು.

ಸುಮಾರು 52 ರ‍್ವೆ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ,ಹೈ ಟೆನ್ ಶನ್ ವಿದ್ಯುತ್ ಮರ‍್ಗ ಹಾದುಹೋಗಿರುವುದು,ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ ವಿಮಾನ ನಿಲ್ದಾಣ ನರ‍್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು ಸಾಧ್ಯಾಸಾಧ್ಯತೆಗಳ ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version