ದಿನದ ಸುದ್ದಿ

ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 12 ಅಂಗನವಾಡಿ ಕಾರ್ಯಕರ್ತೆ ಹಾಗೂ 72 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಜೂ.29 ರಿಂದ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ.29 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ವಿಳಾಸ

http://davanagere.nic.in ಹಾಗೂ ತಾಲ್ಲೂಕುವಾರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ದೂ.ಸಂ ದಾವಣಗೆರೆ: 08192-263219, ಹರಿಹರ: 08192-241431, ಜಗಳೂರು: 08196-227132, ಹೊನ್ನಾಳಿ: 08188-251283 ಚನ್ನಗಿರಿ: 08189-228010 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version