ದಿನದ ಸುದ್ದಿ

ಕೊರೋನಾ : ದಾವಣಗೆರೆಗೆ ಒಲಿದು ಬಂದ ಬೆಳ್ಳಿ ಪ್ರಶಸ್ತಿ

Published

on

ಸುದ್ದಿದಿನ, ದಾವಣಗೆರೆ : ಆರೋಗ್ಯ ಇಲಾಖೆಯಿಂದ ಜಾರಿಗೊಳಿಸುವ ವಿವಿಧ ಲಸಿಕಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಲಾಕ್‍ಡೌನ್ ಹಾಗೂ ಅನ್‍ಲಾಕ್ ಸಂದರ್ಭದಲ್ಲಿ ಹಲವು ಬಗೆಯ ಲಸಿಕೆ ಕಾರ್ಯಕ್ರಮವನ್ನು ದೇಶದ ಎಲ್ಲ ಜಿಲ್ಲೆಗಳಿಗಿಂತಲೂ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಜಾರಿಗೊಳಿಸಿ, ಅನುಷ್ಠಾನಗೊಳಿಸಿದ್ದಕ್ಕಾಗಿ ದೇಶದಲ್ಲಿಯೇ ಜಿಲ್ಲೆಗೆ ಬೆಳ್ಳಿ ಪ್ರಶಸ್ತಿ ಬಂದಿದೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು ಸಭೆಯ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳೂ ಸೇರಿದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸೇರಿದಂತೆ ಆರೋಗ್ಯ ಇಲಾಖೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version