ದಿನದ ಸುದ್ದಿ

ದಾವಣಗೆರೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಇಳಿಕೆ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ 227 ಇದ್ದರೂ ಅದರಲ್ಲಿ ಸಕ್ರಿಯ ಪ್ರಕರಣಗಳು ಕೇವಲ 16 ಬಾಕಿಇವೆ. ಇದುವರೆಗೆ 205 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಮಂಗಳವಾರ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. 285 ಮಾದರಿಗಳು ನೆಗೆಟಿವ್‌ ಎಂದು ವರದಿಯಾಗಿವೆ. ಮಂಗಳವಾರ 226 ಮಂದಿಯ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಇವೂ ಸೇರಿದಂತೆ ಒಟ್ಟು 462 ಮಾದರಿಗಳ ಫಲಿತಾಂಶ ಬರಲು ಬಾಕಿ ಇದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version