Connect with us

ರಾಜಕೀಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ : ಶಾಸಕ ಶಾಮನೂರು ಶಿವಶಂಕರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ 90ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ಮತ್ತು ಸಿಸಿ ರಸ್ತೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪ್ರತಿ ಮನೆಗೂ ದಿನದ 24 ಗಂಟೆ ಕಾಲ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಜಲಸಿರಿ ಯೋಜನೆ ಮುಂದಿನ ಐದಾರು ತಿಂಗಳಲ್ಲಿ ಸಂಪೂರ್ಣ ಅನುಷ್ಟಾನಗೊಳ್ಳಲಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಗುಣಮಟ್ಡದ ರಸ್ತೆಗಳು, ಒಳಚರಂಡಿಗಳ ನಿರ್ಮಾಣ ಕಾರ್ಯ ಈಗಾಗಲೇ ಭರದಿಂದ ಸಾಗಿದೆ ಎಂದು ಹೇಳಿದರು.

ಭವಿಷ್ಯದ ದಾವಣಗೆರೆಯನ್ನು ಗಮನದಲ್ಲಿ ಇಟ್ಟುಕೊಂಡು ನಗರದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲಾಗಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ

Published

on

ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ.

ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು.

ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಲ್ಯಾಣ ಕರ್ನಾಟಕ ; ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು,ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಈ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6 ಸಾವಿರದ 500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ

Published

on

ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಯೋಜನೆಗಳ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸುಗಮ ಸುರಕ್ಷಿತ ರೈಲು ಸೇವೆ ನೀಡಲಾಗುತ್ತಿದ್ದು, ಹಿಂದಿಗಿಂತ ಈಗ ರೈಲು ಸೇವೆ ನೂರುಪಟ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿದ್ದಾರೆ. ಪುಣೆಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ರೈಲು ಸಂಚಾರ ಆರಂಭಗೊಳ್ಳಲಿದ್ದು, ಈ ರೈಲಿಗೆ ಇಂದು ರಾತ್ರಿ 8 ಗಂಟೆಗೆ ಬೆಳಗಾವಿಯಲ್ಲಿ ಹಸಿರು ನಿಶಾನೆ ತೋರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಿತ್ತೂರು ಮಾರ್ಗದ ಬೆಳಗಾವಿ ಧಾರವಾಡ ನೇರ ರೈಲು ಸಂಚಾರ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ಈಯೋಜನೆಯ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ಯೋಜನೆಯ ಅನುಷ್ಠಾನಕ್ಕೆ ಸರ್ವೆ ಕಾರ್ಯ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending