Connect with us

ದಿನದ ಸುದ್ದಿ

ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಲು ಸುತ್ತೋಲೆ; ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ದಾವಣಗೆರೆ, ಬ್ರೆಡ್ಸ್ ಸಂಸ್ಥೆ, ಬೆಂಗಳೂರು. ಡಾನ್ ಬಾಸ್ಕೋ ಬಾಲಕಾರ್ಮಿಕರ ಮಿಷನ್ ಕ್ರೀಮ್ ಯೋಜನೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿಗಳಿಗೆ ಸನ್ಮಾನ ಸಮಾರಂಭ ಹಾಗೂ ಸಿಆರ್‍ಇಎಎಂ ಯೋಜನೆಯ ಅನುಷ್ಠಾನದಲ್ಲಿ ಇಲಾಖೆಗಳ ಸಮನ್ವಯತೆ ಕುರಿತು ಜಿಲ್ಲಾ ಮಟ್ಟದ ಅಡ್ವೋಕಸಿ ಕಾರ್ಯಾಗಾರ ಉಧ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಡಾನ್ ಬಾಸ್ಕೋ ಸಂಸ್ಥೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತಿದ್ದು, ಈ ಸಂಸ್ಥೆ ನಮ್ಮ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ನಮಗೆ ಹೆಮ್ಮೆ. ಮಕ್ಕಳ ಗ್ರಾಮ ಸಭೆ ಮಾಡುವುದರಿಂದ ಒತ್ತಡ, ಬಾಲ ಕಾರ್ಮಿಕ ಪದ್ದತಿ, ಬಾಲ್ಯವಿವಾಹದಂತಹ ಮಕ್ಕಳ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ | ಸತ್ಯಪ್ಪ ಸಾಹುಕಾರ’ ಎಂಬ ರೈತ ನಾಯಕ..!

ಮಕ್ಕಳ ಅನುಕೂಲಗಳ ಬಗ್ಗೆ ಚರ್ಚೆಯಾಗಬೇಕು ಹಾಗೂ ಮಕ್ಕಳ ಹಕ್ಕುಗಳು ಯಾವ ರೀತಿಯಲ್ಲಿ ಉಲ್ಲಂಘನೆಯಾಗುತ್ತವೆ ಎಂಬುದನ್ನು ಚರ್ಚೆ ಮಾಡಿ ಕ್ರಮ ಕೈಗೊಳ್ಳಲು ಸೂಕ್ತ ವೇದಿಕೆ ಕಲ್ಪಿಸಬೇಕು ಮತ್ತು ಮಕ್ಕಳ ಹಕ್ಕುಗಳ ಸಂಘಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತೇಜಿಸಲು ಡಿಡಿಪಿಐ ಮೂಲಕ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಸಂಸ್ಥೆಯು ಎನ್‍ಜಿಒಗಳ ಸಹಾಯದಿಂದ ಬಡ ಮಕ್ಕಳಿಗಾಗಿ, ಮಕ್ಕಳ ಹಕ್ಕುಗಳ ಸಲುವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಿಆರ್‍ಇಎಂ ಯೋಜನೆ ಅಧಿಕಾರಿಗಳನ್ನು ಅಭಿನಂದಿಸಿದರು. ನಮ್ಮ ಎಲ್ಲಾ ಅಧಿಕಾರಿಗಳು ಮಕ್ಕಳ ಸ್ನೇಹಿ ಅಧಿಕಾರಿಗಳಾಗಿದ್ದು ಮಕ್ಕಳ ಹಕ್ಕುಗಳಿಗಾಗಿ ಕೆಲಸ ಮಾಡಲು ಸಿದ್ಧರಿದ್ದಾರೆ ಹಾಗೂ ಮಕ್ಕಳನ್ನು ರಕ್ಷಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದಾರೆ ಎಂದರು.

ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಮಾತನಾಡಿ, ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಗಾಗಿ ಮಹಾನಗರ ಪಾಲಿಕೆ ಬದ್ದವಾಗಿದ್ದು, ಪಾಲಿಕೆಯ ವ್ಯಾಪ್ತಿಗೆ ಬರುವ ಎಲ್ಲಾ ಶಾಲಾ-ಕಾಲೇಜುಗಳ ಬಳಿ ರಸ್ತೆ ತಡೆಯನ್ನು ಹಾಕಿ ನಾಮಫಲಕಗಳನ್ನು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ರೈಲ್ವೆ ಪೊಲೀಸ್ ಅಧಿಕಾರಿ ಮಾತನಾಡಿ, ಕಳೆದೆರಡು ವರ್ಷಗಳಲ್ಲಿ ಮನೆ ಬಿಟ್ಟು ಓಡಿಹೋಗುತ್ತಿದ್ದ ಸುಮಾರು 800 ಮಕ್ಕಳನ್ನು ರೈಲು ನಿಲ್ದಾಣದಲ್ಲಿ ಪತ್ತೆಹಚ್ಚಿ, ಅವರಿಗೆ ಕೌನ್ಸಲಿಂಗ್ ನಡೆಸಿ ಅವರನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್.ಎಮ್ ಮಾತನಾಡಿ, ಇತ್ತೀಚೆಗೆ ಮಕ್ಕಳು ಮನೆ ಬಿಟ್ಟು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಿ, ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಬೆಳೆಯಲು ಬಿಡಬೇಕು. ಶಿಕ್ಷಕರು ಮಕ್ಕಳಲ್ಲಿರುವ ವಿಶೇಷ ಆಸಕ್ತಿ ಗುರುತಿಸಿ ಪೋಷಕರಿಗೆ ತಿಳಿಸುವ ಪ್ರಯತ್ನ ಮಾಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಈ ಮೊದಲು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಈ ಹುದ್ದೆ ದೊರಕಿದ ಮೇಲೆ ಮಕ್ಕಳ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಒಳ್ಳೆಯ ಅವಕಾಶ ದೊರೆತಿದೆ. ಇಂದಿಗೂ ಅನೇಕ ಮಕ್ಕಳು ಸಂಕಷ್ಠದಲ್ಲಿದ್ದಾರೆ ಅವರನ್ನು ಗುರುತಿಸಿ ಸಹಾಯ ಮಾಡುವ ಅಭಿಲಾಶೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ಅಧಿಕಾರಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಅವರಿಗೆ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿಗಳಿಂದ ಪುಸ್ತಕ ಬಿಡುಗಡೆ : ‘ಮಕ್ಕಳಿಗಾಗಿ ಮಕ್ಕಳ ಹಕ್ಕು’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಕ್ಕಳಿಗಾಗಿ ಇಂತಹ ಪುಸ್ತಕವನ್ನು ಹೊರತರುತ್ತಿರುವುದು ಶ್ಲಾಘನೀಯ. ನಾವು ಕೂಡ ಸರ್ಕಾರಕ್ಕೆ ಪುಸ್ತಕ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೌಸರ್ ರೇಷ್ಮಾ, ಅಲ್ಪ ಸಂಖ್ಯಾತರ ಇಲಾಖೆಯ ಅಧಿಕಾರಿ ಬಿದರಿ, ಪರಿಶಿಷ್ಠ ಪಂಗಡ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ನಾಯ್ಕ. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‍ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯ ವಕೀಲರ ಸಂಘದ ಸದಸ್ಯರಾದ ಅರುಣ್ ಕುಮಾರ್ ಎಲ್.ಹೆಚ್, ಬ್ರೆಡ್ಸ್ ಸಂಸ್ಥೆ, ಕ್ರೀಮ್ ಯೋಜನೆ ಕಾರ್ಯಕಾರಿ ನಿರ್ದೇಶಕ ಫಾ. ಜಾಯ್ ನೆಡುಂಪರಂಬಿಲ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending