ದಿನದ ಸುದ್ದಿ
ನ. 19 ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ದಾವಣಗೆರೆ ಜಿಲ್ಲಾ ಪ್ರವಾಸ
ಸುದ್ದಿದಿನ,ದಾವಣಗೆರೆ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.19 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ದಾವಣಗೆರೆಗೆ ಆಗಮಿಸಿ, ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ‘ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಬೆಂಗಳೂರು-1, ಕರ್ನಾಟಕ-1 ಮಾದರಿಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಯೋಜನೆಯ ಅನುಷ್ಟಾನವನ್ನು ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಲೋಕಾರ್ಪಣೆ’ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243