ದಿನದ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆಯ ಚೈತ್ರಾಗೆ ದ್ವಿತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಭಾರತ ಸ್ವಾತಂತ್ರ್ಯದ 75 ವರ್ಷಗಳ ಸಂಭ್ರಮಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಿಂದ ನಡೆಸಲಾದ ರಾಜ್ಯ ಮಟ್ಟದ ಆನ್‍ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆಯ ದಾವಣಗೆರೆ ಉತ್ತರ ವಲಯದ ಬಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ರವರು ರಾಜ್ಯ ಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5 ರಿಂದ 10ನೇ ತರಗತಿಯ 2,12,973 ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಸಪ್ರಶ್ನೆ ಸ್ಪರ್ಧೆಯು ತಾಲ್ಲೂಕು, ಜಿಲ್ಲಾ, ವಿಭಾಗಮಟ್ಟದಲ್ಲಿ ನಡೆದಿದ್ದು, ಈ ವಿದ್ಯಾರ್ಥಿನಿಯು 3 ಹಂತಗಳಲ್ಲಿ ವಿಜೇತಳಾಗಿ ಮಾ.24 ರಂದು ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಈ ವಿದ್ಯಾರ್ಥಿಯ ಸಾಧನೆಗೆ ಡಿಡಿಪಿಐ ಜಿ.ಆರ್. ತಿಪ್ಪೇಶಪ್ಪ, ಮತ್ತು ಜಿಲ್ಲಾ ನೋಡಲ್ ಅಧಿಕಾರಿ ಸಂಜೀವಕುಮಾರ್ ಕೆ.ಎಸ್., ಸಹಾಯಕ ಯೋಜನಾ ಸಮನ್ವಯಾಧಿಕಾರಿ (ಗುಣಮಟ್ಟ) ಇವರು ಪ್ರಶಂಶಿಸಿರುತ್ತಾರೆ. ಚೈತ್ರಾ ವಿದ್ಯಾರ್ಥಿನಿಗೆ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಿಂದ ರೂ.8500/- ಬಹುಮಾನ ನೀಡಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version