ದಿನದ ಸುದ್ದಿ

ದಾವಣಗೆರೆ ಜಿಲ್ಲೆ ಮಳೆ ವಿವರ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.18 ರಂದು 10.00 ಮಿ.ಮೀ. ಸರಾಸರಿ ಮಳೆಯಾಗಿದ್ದು. ಒಟ್ಟಾರೆ 17.85 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 2.00 ಮಿ.ಮೀ ಇದ್ದು 9.00 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 4.00 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರದಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 4.00 ಮಿ.ಮೀ ವಾಸ್ತವ ಮಳೆಯಾಗಿದೆ.

ಹೊನ್ನಾಳಿಯಲ್ಲಿ 12.00 ಮಿ.ಮೀ ವಾಸ್ತವ ಮಳೆಯಾಗಿದೆ. ಜಗಳೂರಿನಲ್ಲಿ ವಾಡಿಕೆ ಮಳೆ 1.10 ಮಿ.ಮೀ ಇದ್ದು 5.04 ಮಿ.ಮೀ ವಾಸ್ತವ ಮಳೆಯಾಗಿದೆ. ನ್ಯಾಮತಿಯಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 29.00 ಮಿ.ಮೀ ವಾಸ್ತವ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸರಾಸರಿ ವಾಡಿಕೆ 1.00 ಮಿ.ಮೀ ಇದ್ದು ವಾಸ್ತವ ಮಳೆ 10.00 ಮಿ.ಮೀ ಆಗಿದೆ.

ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 3 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, 5 ಎಕರೆ ಬಾಳೆ ಬೆಳೆ ಮತ್ತು 1 ಎಕರೆ ಮೆಕ್ಕೆಜೋಳ ಬೆಳೆ ಹಾನಿಯಾಗಿದ್ದು ಒಟ್ಟು 5.75 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕಿನಲ್ಲಿ 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, 0.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ನ್ಯಾಮತಿ ತಾಲ್ಲೂಕಿನಲ್ಲಿ 2 ಎಕರೆ ಬಾಳೆ ಮತ್ತು 3.20 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 1.30 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 1 ಕಚ್ಚಾ ಮನೆ ಹಾನಿಯಾಗಿದ್ದು, 0.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಗಳೂರು ತಾಲ್ಲೂಕಿನಲ್ಲಿ 15 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ಹಾಗೂ 2 ಎಕರೆ ಈರುಳ್ಳಿ ಬೆಳೆ ಮತ್ತು 7 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು ಒಟ್ಟು ರೂ. 9.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟು 17.85 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version