ದಿನದ ಸುದ್ದಿ
ದಾವಣಗೆರೆ | ಡಿಆರ್ ಆರ್ ಕಾಲೇಜು ಪ್ರವೇಶ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಇಲ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಡಿಆರ್ ಆರ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶದ ಅವಧಿಯನ್ನು ಇದೇ ಸೆ. 2 ರ ವರೆಗೆ ವಿಸ್ತರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸದಾನಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2021-22 ನೇ ಸಾಲಿನ ಪ್ರವೇಶಕ್ಕೆ ಎಲ್ಲಾ ಡಿಪ್ಲೊಮ ಕೋರ್ಸ್ ಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದ್ದು, ಉತ್ತಮ ಗುಣಮಟ್ಟದ ಲ್ಯಾಬ್ ಗಳು, ನುರಿತ ಶಿಕ್ಷಕರಿಂದ ಬೋಧನೆಯಲ್ಲೇ ಜಿಲ್ಲೆಯಲ್ಲಿಯೇ ಪ್ರಖ್ಯಾತಿಯಾಗಿದೆ. ಸಿವಿಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್, E&C ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಎಸ್ ಎಸ್ ಎಲ್ ಸಿ ಅಂಕಪಟ್ಟಿ, ವರ್ಗಾವಣೆ ಪತ್ರ, ಶಾಲಾ ದಾಖಲಾತಿ ಪತ್ರದೊಂದಿಗೆ ವಿದ್ಯಾರ್ಥಿಗಳು ನಿಗಧಿತ ಸಮಯಕ್ಕೆ ಬಂದು ಡಿಆರ್ ಆರ್ ಸರ್ಕಾರಿ ಕಾಲೇಜಿಗೆ ದಾಖಲಾಗಿ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಭೇಟಿನೀಡಿ ಮಾಹಿತಿ ಪಡೆಯಿರಿ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243