Connect with us

ದಿನದ ಸುದ್ದಿ

ದಾವಣಗೆರೆ | ಆಕ್ಸಿಜನ್ ಉಸ್ತುವಾರಿ ತಂಡಗಳ ರಚನೆ ;ಖಾಸಗಿ ಆರೋಗ್ಯ ಸೇವೆ ಪ್ಯಾಕೇಜ್ ದರ ಪರಿಷ್ಕರಣೆ : ಜಿಲ್ಲಾಧಿಕಾರಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ಏರು ಮುಖ ಕಾಣಿಸುತ್ತಿದ್ದು ಸೋಂಕಿತರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆರೋಗ್ಯ ಸೇವೆಗೆ ನೀಡುತ್ತಿರುವ ಪ್ಯಾಕೇಜ್ ದರಗಳನ್ನು ಸರ್ಕಾರ ಪರಿಷ್ಕರಿಸಿ ಆದೇಶಿಸಿದೆ.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪಿಪಿಇ ಹಾಗೂ ಪರಿಕರಗಳನ್ನು ಒಳಗೊಂಡಂತೆ ಸೂಚಿಸಿರುವ ದರಗಳು ಇವಾಗಿದ್ದು ಸಾರ್ವಜನಿಕ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸಾಗಿರುವ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ದಿನವೊಂದಕ್ಕೆ ಈ ಕೆಳಕಂಡ ಪ್ಯಾಕೇಜ್ ದರಗಳು ಅಧಿಸೂಚನೆಯ ದಿನಾಂಕ 06-05-2021 ರಿಂದ ಜಾರಿಗೊಳ್ಳುತ್ತವೆ.

ಇದನ್ನೂ ಓದಿ | ನನ್ನ ಪತ್ನಿಗೆ ವೆಂಟಿಲೇಟರ್ ಕೊಡಿಸಲು ಸಾಧ್ಯವಾಗ್ತಿಲ್ಲ : ಗದ್ಗದಿತರಾದ ಮೈಸೂರು ಡಿಎಚ್ಓ ಅಮರನಾಥ್

ಪರಿಷ್ಕøತ ದರ

ಜನರಲ್ ವಾರ್ಡ್ ರೂ.5200, ಹೆಚ್‍ಡಿಯು ರೂ.8000, ಐಸೊಲೇಷನ್ ಐಸಿಯು ವೆಂಟಿಲೇಟರ್‍ರಹಿತ ರೂ.9750 ಮತ್ತು ಐಸೊಲೇಷನ್ ಐಸಿಯು ವೆಂಟಿಲೇಟರ್‍ಸಹಿತ ರೂ.11500 ಆಗಿರುತ್ತದೆ.

ಈ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ (51 ರಿಂದ 60) ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ. ಇದಲ್ಲದೇ ಸಂಬಂಧಪಟ್ಟ ಭಾರತೀಯ ದಂಡನಾ ಕಾಯ್ದೆಯ ಸೂಕ್ತ ಸೆಕ್ಷನ್‍ಗಳಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ ಮತ್ತು ಇತರೆ ಕಾನೂನುಗಳು ಅನ್ವಯಿಸುತ್ತವೆ. ಖಾಸಗಿ ಈ ದರಕ್ಕಿಂತ ಹೆಚ್ಚು ವಸೂಲಿ ಮಾಡಿದಲ್ಲಿ ಡಿಹೆಚ್‍ಓ ರವರಿಗೆ ದೂರು ನೀಡಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾದಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಆಕ್ಸಿಜನ್ ಉಸ್ತುವಾರಿ ತಂಡ

ಕೋವಿಡ್ 19 ಎರಡನೇ ಅಲೆಯ ಚಿಕಿತ್ಸೆಗೆ ಅತ್ಯಗತ್ಯವಾಗಿರುವ ಆಕ್ಸಿಜನ್ ಪೂರೈಕೆ, ಬೇಡಿಕೆ ಮತ್ತು ಲಭ್ಯತೆ ಕುರಿತು ದಿನದ 24 ಗಂಟೆ ಪರಿವೀಕ್ಷಣೆ ಮಾಡಲು ಮೂರು ಆಕ್ಸಿಜನ್ ಉಸ್ತುವಾರಿ ತಂಡಗಳನ್ನು ನಿಯೋಜಿಸಲಾಗುವುದು. ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಸಹಾಯಕರನ್ನೊಳಗೊಂಡ 8 ಅವಧಿಯ ಮೂರು ಶಿಫ್ಟ್‍ಗಳಲ್ಲಿ ಕೆಲಸ ಮಾಡುವ ತಂಡಗಳನ್ನು ನಿಯೋಜಿಸಲಾಗುವುದು.

ಇಂದಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆಕ್ಸಿಜನ್‍ನ್ನು ಎಲ್ಲೂ ವ್ಯರ್ಥ ಮಾಡದಂತೆ, ನ್ಯಾಯಯುತವಾಗಿ ಬಳಕೆ ಮಾಡುವ ಬಗ್ಗೆ ಹಾಗೂ ಉಸ್ತುವಾರಿ ಮಾಡುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending