ದಿನದ ಸುದ್ದಿ

ದಾವಣಗೆರೆ | ಅಕ್ರಮ ಕಲ್ಲುಗಣಿಗಾರಿಕೆ ವಿಡಿಯೋ ಮಾಡಲು ಹೋದ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮ ಗಣಿಗಾರಿಕೆಯ ವಿಡಿಯೋ ಮಾಡಲು ತೆರಳಿದ್ದ ಖಾಸಗಿವಾಹಿನಿಯ ಕ್ಯಾಮೆರಾಮನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮಂಗಳವಾರ ಪತ್ರಕರ್ತರು ಎಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದ ರಾಸ್ತಾಹೋಟೆಲ್ ಹತ್ತಿರ ಅಕ್ರಮಗಣಿಗಾರಿಕೆಯ ಮಾಹಿತಿ ತಿಳಿದ ಕ್ಯಾಮೆರಾಮನ್ ವರದಿ ಮಾಡಲು ಹೋಗಿದ್ದ ವೇಳೆ ಆರೋಪಿಗಳು ಹಲ್ಲೆ ನಡೆಸಿದ್ದರು.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರಾಧ್ಯ ಮಾತನಾಡಿ, ಕ್ಯಾಮೆರಾಮನ್ ಕಿರಣ್ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಾಧ್ಯಮದವರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಘಟನೆಗಳು ಪದೇ ಪದೇ ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಿದೆ. ಈ ಕಾರಣದಿಂದ ಪತ್ರಕರ್ತರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸಲು ಆಗದಂತಹ ವಾತಾವರಣ ಸೃಷ್ಟಿಯಾಗಿದೆ.
ಈ ಹಿನ್ನೆಲೆಯಲ್ಲಿ ಕಲ್ಲು ಗಣಿಗಾರಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ ಪತ್ರಕರ್ತರಿಗೆ ರಕ್ಷಣೆ ಒದಗಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿ ಮಮತಾ ಹೊಸಗೌಡರ್ ಮಾತನಾಡಿ, ಅಕ್ರಮ ಗಣಿಗಾರಿಕೆ ನಡೆಸುವರರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ . ಹಾಗೆ ಪತ್ರಕರ್ತರಿಗೆ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿಗಳ ಮೂಲಕ ಮುಖಾಂತರ ಸರಕಾರಕ್ಕೆ ಮಾಹಿತಿ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಬಸವರಾಜ್ ದೊಡ್ಮನಿ, ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ್ ಕಾಡಜ್ಜಿ, ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ, ತಾರಾನಾಥ್, ನಾಗರಾಜ್ ಬಡದಾಳ್, ಕಿರಣ್, ಯೋಗಿಶ್, ವಿನಾಯಕ್ ಪೂಜಾರ್, ರಾಮು, ಕೃದ್ದೀನ್, ಚಂದ್ರಶೇಖರ್, ವಿಜಯ್ ಜಾಧವ್, ಸತೀಶ್, ನಿಂಗಪ್ಪಘಿ, ಬಸವರಾಜ್‌ನವಣಿ, ಭಾಸ್ಕರ್, ಸೇರಿದಂತೆ ಕೂಟದ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version