ದಿನದ ಸುದ್ದಿ
ಪೌರಕಾರ್ಮಿಕರ ವಸತಿಗೃಹಗಳ ಶೀಘ್ರ ವಿತರಣೆಗೆ ಸೂಚನೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/12/suddidina_Davangere-877.jpg&description=ಪೌರಕಾರ್ಮಿಕರ ವಸತಿಗೃಹಗಳ ಶೀಘ್ರ ವಿತರಣೆಗೆ ಸೂಚನೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/12/suddidina_Davangere-877.jpg&description=ಪೌರಕಾರ್ಮಿಕರ ವಸತಿಗೃಹಗಳ ಶೀಘ್ರ ವಿತರಣೆಗೆ ಸೂಚನೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರವನ್ನು ಸುಂದರ ಹಾಗೂ ಸ್ವಚ್ಚ ನಗರವನ್ನಾಗಿಸಲು ಎಲ್ಲರೂ ಶ್ರಮಿಸುತ್ತಿದ್ದು, ಬಿಡಾಡಿ ಹಂದಿಗಳ ಹಾವಳಿ ಹೆಚ್ಚಾಗಿದೆ. ರಸ್ತೆಯಲ್ಲಿ ವಾಹನಗಳಿಗೆ ಅಡ್ಡಬರುವುದು ಸೇರಿದಂತೆ ರಸ್ತೆಗಳನ್ನು ಗಲೀಜು ಮಾಡುತ್ತಿದ್ದು ಇದನ್ನು ತಡೆಯಲು ಸಂಬಂಧಿಸಿದವರ ಮೇಲೆ ಸೂಕ್ತ ಹಾಗೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಅಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಅವರು ಹಂದಿ ಸಾಕಾಣಿಕೆಗೆ ನಮ್ಮ ವಿರೋಧವಿಲ್ಲ. ಆದರೆ ಸಂಬಂಧಿಸಿದ ಹಂದಿ ಮಾಲೀಕರು ಕಾಂಪೌಂಡನ್ನು ನಿರ್ಮಿಸಿಕೊಂಡು ಅಥವಾ ಹೊರ ವಲಯದಲ್ಲಿ ಹಂದಿ ಸಾಕಾಣಿಕೆ ಮಾಡಿಕೊಳ್ಳಲಿ ಎಂದರು.
ಆದರೆ ಹಂದಿಗಳ ಕಾರಣದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದನ್ನು ಸಹಿಸಲು ಆಗುವುದಿಲ್ಲ. ಹಾಗಾಗಿ ಮಹಾನಗರಪಾಲಿಕೆಯಲ್ಲಿ ಕೂಡಲೇ ಹಂದಿ ಮಾಲೀಕರ ಸಭೆ ಕರೆದು ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಾಗೂ ಪಾಲಿಕೆ ಸ್ವಚ್ಚತೆಗೆ ಹೆಚ್ಚಿನ ಗಮನ ನೀಡಬೇಕು. ರಸ್ತೆಗಳ ಮೇಲೆಲ್ಲಾ ಅಲ್ಲಲ್ಲಿ ಕಸ ಸುರಿದಿರುವುದು ಕಂಡು ಬರುತ್ತಿದ್ದು, ಅದನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು ಎಂದರು.
ವಸತಿಗೃಹ ಶೀಘ್ರ ಸಿದ್ದಪಡಿಸಿ ನೀಡಲು ಸೂಚನೆ: ಮಹಾನಗರಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲು ಸಿದ್ದಗೊಳ್ಳುತ್ತಿರುವ ವಸತಿಗೃಹಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಒಂದೆರಡು ತಿಂಗಳಲ್ಲಿ ಸಂಪೂರ್ಣಗೊಳಿಸಿ ಉದ್ಘಾಟನೆ ಮಾಡಿಸಲು ಕ್ರಮ ವಹಿಸುವಂತೆ ತಿಳಿಸಿದರು.
ನಗರಭಾಗದಲ್ಲಿ 24*7 ಕುಡಿಯುವ ನೀರು ಒದಗಿಸುವ ಜಲಸಿರಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಲಸಿರಿ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, 2022 ರೊಳಗೆ ಪೂರ್ಣಗೊಳಿಸುವಂತೆ ಏಜೆನ್ಸಿಯವರಿಗೆ ಗಡುವು ನೀಡಲಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 2022 ರವರೆಗೆ ಕಾಯುವುದು ಬೇಡ. ಅಲ್ಲಿಯವರೆಗೆ ಜನರಿಗೆ ಕುಡಿಯುವ ನೀರು ಬೇಡವೇ? ಆದಷ್ಟು ಬೇಗ ನನ್ನ ಅವಧಿಯಲ್ಲಿಯೇ ಪೂರ್ಣಗೊಳಿಸಲು ಕ್ರಮವಹಿಸಿ ಎಂದರು.
ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ವಿವರಿಸಿದ ಅವರು ಜಿಲ್ಲೆಯಲ್ಲಿ 109 ಕಡೆ ಐಎಲ್‍ಆರ್ ಪಾಯಿಂಟ್‍ಗಳು ಸಿದ್ದವಿದ್ದು, ತಾಲ್ಲೂಕು ಹಂತಗಳಲ್ಲಿ ಸಭೆಗಳು ನಡೆದಿವೆ. ಇಂದೇ ಲಸಿಕೆ ಬಂದರೂ ಸಂಬಂಧಿಸಿದವರಿಗೆ ನೀಡಲು ಎಲ್ಲ ತಯಾರಿ ಆಗಿದೆ ಎಂದರು.
ಜನಸಂಪರ್ಕ ಸಭೆ
ಮುಂಬರುವ ಜನವರಿಯಿಂದ ತಾಲ್ಲೂಕು ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಆಯೋಜಿಸಿ, ಅರ್ಜಿದಾರರಿಂದ ಅರ್ಜಿಗಳನ್ನು ಪಡೆದು ಶೀಘ್ರವಾಗಿ ವಿಲೇವಾರಿ, ಸೌಲಭ್ಯ ಒದಗಿಸುವಂತೆ ಸೂಚನೆ ನೀಡಿದ ಅವರು ತಾವೂ ಜನಸಂಪರ್ಕ ಸಭೆಗಳಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಂತರಾಯ ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸಿ ಮಮತಾ ಹೊಸಗೌಡರ್ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓ ರೇಷ್ಮಾ ಹಾನಗಲ್, ಡಿಹೆಚ್‍ಓ ಡಾ.ನಾಗರಾಜ್, ಡಿಎಸ್‍ಓ ಡಾ.ರಾಘವನ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ1 hour agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

