ದಿನದ ಸುದ್ದಿ
22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿಗೆ ಜೂ.22 ರಂದು ಚಾಲನೆ , ರೈತರು ಸಹಕರಿಸಲು ಸಂಸದ ಜಿ.ಎಂ.ಸಿದ್ದೇಶ್ವರ ಮನವಿ
ಸುದ್ದಿದಿನ,ದಾವಣಗೆರೆ :ಮಳೆಗಾಲದ ಅವಧಿಯಲ್ಲಿ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾದ ರಾಜನಹಳ್ಳಿ ಏತ ನೀರಾವರಿಗೆ ಜೂನ್ 22 ರಂದು ಚಾಲನೆ ನೀಡಲಾಗುವುದು ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ಹೇಳಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆಯ ನಿರ್ವಹಣೆ ಮತ್ತು ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿನ ಪೈಪ್ ಶಿಫ್ಟಿಂಗ್ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುಮಾರು 9 ವರ್ಷಗಳ ಹಿಂದೆ ಮಂಜೂರಾತಿ ಪಡೆದುಕೊಂಡ ರಾಜನಹಳ್ಳಿ ಜಾಕ್‍ವೆಲ್ ಯೋಜನೆ ಸಮರ್ಪಕವಾಗಿ ಜಾರಿಯಾಗಿಲ್ಲ. ಇದಕ್ಕೆ ಕಂಟ್ರಾಕ್ಟುದಾರರು ಸೇರಿದಂತೆ ಅನೇಕ ತಾಂತ್ರಿಕ ತೊಂದರೆಗಳು ಕಾರಣವಾಗಿದ್ದವು. ಈ ಬಾರಿ ಶೇ.100 ಕೆರೆಗಳಿಗೆ ನೀರು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ.
ಎಲ್ಲ ಕಾಮಗಾರಿಗಳು ಮುಗಿದಿವೆ. ಆದರೆ ರೈತರು ಈ ಯೋಜನೆ ಸಫಲವಾಗುವಲ್ಲಿ ಸಹಕರಿಸಬೇಕು. ಎಲ್ಲರೂ ಚೆನ್ನಾಗಿರಬೇಕೆಂಬುದೇ ನಮ್ಮ ಆಶಯ. ಎಲ್ಲ 22 ಕೆರೆಗಳಿಗೆ ನೀರು ತಲುಪಿಸಲು ಪ್ರಯತ್ನ ಮಾಡಲಾಗುವುದು. ಆದಕಾರಣ ರೈತರು ಮಧ್ಯದಲ್ಲಿ ವಾಲ್ವ್ ಒಡೆಯುವ, ಇನ್ನಿತರೆ ಮಾಡದೇ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಯೋಜನೆಯಡಿ ತುಂಗಭದ್ರ ನದಿಗೆ ಅಡ್ಡಲಾಗಿ 30 ಅಡಿ ಬ್ಯಾರೇಜ್ ನಿರ್ಮಿಸಲಾಗಿದೆ. ನದಿಯಿಂದ 240 ಮೀಟರ್‍ವರೆಗಿನ ಕಾಲುವೆಯಲ್ಲಿ 1 ಅಡಿ ಶಿಲ್ಟ್ ಇದ್ದು ಅದನ್ನು ಕ್ಲಿಯರ್ ಮಾಡಿಸಲಾಗುವುದು. ಕೆಇಬಿ ಇಲಾಖೆ ಸಹ ಅನಿರ್ಬಂಧಿತ ವಿದ್ಯುತ್ ನೀಡುವ ಭರವಸೆ ನೀಡಿದ್ದು ನೀರಾವರಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಮತ್ತು ಕೆಇಬಿ ಎಲ್ಲ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, 22 ಕೆರೆ ತುಂಬಿಸುವ ಹೋರಾಟ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಸಕರು, ಜನಪ್ರತಿನಿಧಿಗಳು, ಸಿರಿಗೆರೆ ಶ್ರೀಗಳು ಎಲ್ಲ ಸೇರಿ 22 ಕೆರೆ ತುಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಯೋಜನೆ ಯಶಸ್ವಿಯಾಗಲು ರೈತರೂ ಸಹಕರಿಸಬೇಕು. ಜೊತೆಗೆ ವರುಣನ ಕೃಪೆ ಅತ್ಯವಶ್ಯಕವಾಗಿದೆ ಎಂದರು.
ಈ ಯೋಜನೆಯು ಜೂನ್ ತಿಂಗಳಿನಿಂದ ನವೆಂಬರ್ ತಿಂಗಳವರೆಗೆ ಒಟ್ಟು 180 ದಿನಗಳ ವರೆಗೆ ತುಂಗಭದ್ರ ನದಿಯಿಂದ ನೀರನ್ನು ಎತ್ತಿ 22 ಕೆರೆಗಳಿಗೆ ಶೇ.75 ತುಂಬಿಸುವ ಯೋಜನೆಯಾಗಿದೆ. ಈ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದ್ದು ಮೊದಲನೇ ಹಂತದಲ್ಲಿ ಹರಿಹರ ತಾಲ್ಲೂಕಿನಲ್ಲಿ ಹಲಸಬಾಳು ಗ್ರಾಮದ ಬಳಿ ತುಂಗಭದ್ರ ನದಿಯಿಂದ 100 ಮೀಟರ್ ಎತ್ತರಕ್ಕೆ ನೀರನ್ನೆತ್ತಿ 28 ಕಿ.ಮೀ. ದೂರದಲ್ಲಿರುವ ದಾವಣಗೆರೆ ತಾಲ್ಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಹತ್ತಿರದ ಎರಡನೇ ಹಂತಕ್ಕೆ ನೀರೊದೊಗಿಸುವುದು. ಎರಡನೇ ಹಂತದಲ್ಲಿ ಉದ್ದೇಶಿತ ಕೆರೆಗಳಿಗೆ ಸುಮಾರು 70 ಮೀಟರ್ ಎತ್ತರಕ್ಕೆ ನೀರೆತ್ತಿ ಒಟ್ಟು 150 ಕಿ.ಮೀ ಪೈಪ್‍ಲೈನ್ ಮುಖಾಂತರ ಯೋಜಿತ ಕೆರೆಗಳಿಗೆ ನೀರೊದೊಗಿಸಲಾಗುವುದು.
ನೀರಾವರಿ ನಿ ನಿ ನಂ.5 ಭದ್ರನಾಲಾ ವಿಭಾಗದ ಕಾರ್ಯಪಾಲಕ ಅಭಿಯಂತರ ಮಲ್ಲಪ್ಪ ಮಾತನಾಡಿ, ರಾಜನಹಳ್ಳಿ ಜಾಕ್‍ವೆಲ್ ಯೋಜನೆಗೆ ಸಂಬಂಧಿಸಿದಂತೆ ಇನ್ನು 5.5 ಕಿ.ಮೀ ಪೈಪ್‍ಲೈನ್ ಕೆಲಸ ಬಾಕಿ ಇದೆ ಹಾಗೂ ಮೂರು ಕಡೆ ಗ್ಯಾಪ್ ಇದ್ದು ಇನ್ನೊಂದು ವಾರದೊಳಗೆ ಆ ಕೆಲಸವನ್ನು ಪೂರ್ಣಗೊಳಿಸಿ ಜೂನ್ 22 ರೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿ4 ರ ಪಕ್ಕದಲ್ಲಿನ ಪೈಪ್ ಶಿಫ್ಟಿಂಗ್ ಕಾಮಗಾರಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನಪ್ಪ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ-4 ರ ಸರಪಳಿ 260 ರಿಂದ 278 ರವರೆಗೆ ಆಯ್ದ ಭಾಗಗಳಲ್ಲಿ ಒಟ್ಟು ಉದ್ದ 12 ಕಿ.ಮೀ ಗಳಲ್ಲಿ 6.25 ಕಿ.ಮೀ ಪೂರ್ಣಗೊಂಡಿದ್ದು ಉಳಿದ 5.75 ಕಾಮಗಾರಿ ಮಾಡಿಸಬೇಕಾಗಿದೆ. ಭೂಸ್ವಾಧೀನ ಪ್ರಕ್ರಿಯೆ ತಡವಾದ್ದರಿಂದ ಈ ಕಾಮಗಾರಿ ಬಾಕಿ ಇದೆ ಎಂದರು.
ಸಂಸದರು ಪ್ರತಿಕ್ರಿಯಿಸಿ ಇದೇ ಜೂನ್ 26 ಕ್ಕೆ ಈ ಕಾಮಗಾರಿ ಮುಗಿಯಬೇಕಿತ್ತು. ಭೂಸ್ವಾಧೀನವಾಗಿಲ್ಲವೆಂದು ನಮ್ಮ ಗಮನಕ್ಕೆ ತರಬೇಕಿತ್ತು. ಕೂಡಲೇ ಈ ಕಾರ್ಯ ಕೈಗೊಂಡು ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಶಾಮನೂರು ಬಳಿ ಈ ಸಮಸ್ಯೆ ಇದ್ದು ನಾನು, ಎಸಿ ಮತ್ತು ತಹಶೀಲ್ದಾರ್ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅಲ್ಲಿಗೆ ಭೇಟಿ ನೀಡಿ ಕ್ರಮ ವಹಿಸುತ್ತೇನೆ ಎಂದರು.
ಸಭೆಯಲ್ಲಿ ಶಾಸಕರಾದ ಪ್ರೊ.ಲಿಂಗಣ್ಣ, 22 ಕೆರೆಗಳಿಗೆ ನೀರು ತುಂಬಿಸುವ ಯೋಜನಾ ಸಮಿತಿಯ ಅಧ್ಯಕ್ಷ ಡಾ.ಮಂಜುನಾಥ ಗೌಡ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್‍ಪಿ ರಾಜೀವ್, ಎಸಿ ಮಮತಾ ಹೊಸಗೌಡರ್ ದಾವಣಗೆರೆ ತಹಶೀಲ್ದಾರ್ ಗಿರೀಶ್, ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ನಗರದ ಗುರುಕುಲ ವಸತಿಯುತ ಶಾಲೆಯ ಮಕ್ಕಳೊಂದಿಗೆ ಬೆರೆತು ತಮ್ಮ ಲೋಕಸಭಾ ಸದಸ್ಯತ್ವದ ಅನುಭವದ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರಲ್ಲದೇ ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.
ಇತ್ತೀಚಿಗೆ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಗುರುಕುಲ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ವೃಂದದವರೊಂದಿಗೆ ಭೇಟಿ ನೀಡಿ, ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಶುಭ ಕೋರಿದರಲ್ಲದೇ, ಕೆಲ ಸಮಯ ಅವರೊಂದಿಗೆ ಲೋಕಸಭಾ ಕ್ಷೇತ್ರದ ಸೇವೆಯ ಬಗ್ಗೆ ಮಾತುಕತೆ ನಡೆಸಿದರು.
ಪ್ರಭಾ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳನ್ನು ಅನುಸರಿಸಿ, ಸಮಾಜಕ್ಕೆ ಹಿತಕರವಾಗಿ ಕೊಡುಗೆ ನೀಡುವ ಮಹತ್ವವನ್ನು ವಿವರಿಸಿದರು. ಅವರು ಮಕ್ಕಳ ಹಲವು ಪ್ರಶ್ನೆಗಳಿಗೆ ಸಮಾಧಾನಕರ ಉತ್ತರಗಳನ್ನು ನೀಡಿದರು.
ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಹೊಣೆಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ಹೊಂದಿದರು. ಇವರ ಮಾತುಗಳು ಪ್ರೋತ್ಸಾಹ ಮತ್ತು ಮಹತ್ವದ ಸಂದೇಶಗಳಿಂದ ತುಂಬಿದ್ದವು. ಅಲ್ಲದೇ ಮಕ್ಕಳಿಗೆ ಭವಿಷ್ಯದಲ್ಲಿ ಸ್ಫೂರ್ತಿಯಿಂದ ಉಜ್ವಲತೆಗೆ ಸಾಕ್ಷಿಯಾದವು.
ಓದುತ್ತಿರುವ ತರಗತಿಯ ಬಗ್ಗೆ ಎಲ್ಲ ಮಕ್ಕಳ ವಿಚಾರಿಸುತ್ತಾ, ಭವ್ಯ ಭವಿಷ್ಯದಲ್ಲಿ ಯಾವ ಸ್ಥಾನ ಇಚ್ಚಿಸುವಿರಾ ಎಂದು ಕೇಳುತ್ತಾ, ಶಿಕ್ಷಕ ವೃತ್ತಿಯೂ ಸಹ ಅಮೂಲ್ಯವಾಗಿದೆ. ಅಕ್ಷರ ಜ್ಞಾನ ನೀಡುವ ಕೆಲಸಕ್ಕೂ ಒತ್ತು ಕೊಡಬೇಕು. ಜನರ ಬಳಿಯೇ ಹೋಗಿ ಕಷ್ಟ, ನಷ್ಟಗಳ ವಿಚಾರಿಸಿ ಪರಿಹರಿಸುವುದೇ ನಿಜವಾದ ಸಮಾಜ ಸೇವೆ. ಅದುವೇ ಸಾಮಾಜಿಕ ನಾಯಕನ ಹೊಣೆಗಾರಿಕೆ. ಈ ರೀತಿ ನಿಮ್ಮ ಭವಿಷ್ಯದಲ್ಲೂ ಆಗಿ ಎಂದರು.
ಮಕ್ಕಳು ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಸೆಲ್ಯೂಟ್ ಮೂಲಕ ಅವರ ಲೋಕಸಭಾ ಸ್ಥಾನ ಅಲಂಕರಿಸಿದ್ದಕ್ಕೆ ಹಾಗೂ ಅವರ ಸೇವೆಗೆ ಗೌರವ ಸೂಚಿಸಿದರು. ಇದಕ್ಕೆ ಪ್ರಭಾ ಮಲ್ಲಿಕಾರ್ಜುನ ತಾವೂ ಸೆಲ್ಯೂಟ್ ಮಾಡಿ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು. ಅಲ್ಲದೇ ವಿದ್ಯಾರ್ಥಿಗಳು ನೆನಪಿನ ಕಾಣಿಕೆಯಾಗಿ ಪ್ರಭಾ ಮಲ್ಲಿಕಾರ್ಜುನ ಭಾವಚಿತ್ರವುಳ್ಳ ಫೋಟೋ ನೀಡಿದರು.
ಈ ಸಂದರ್ಭದಲ್ಲಿ ಗುರುಕುಲ ವಸತಿಯುತ ಶಾಲೆ ಅಧ್ಯಕ್ಷ ಅಬ್ದುಲ್ ಆರ್., ಸಾನಿಯಾ ಜೆಹರ, ಶಿಕ್ಷಣ ಸಂಯೋಜಕರಾದ ಶ್ವೇತ.ಎಂ. ಹೆಚ್, ರೇಖಾ ಎಲ್. ಪಾಟೀಲ್, ಎಜಾಜ್ ಅಹ್ಮದ್, ಸಂದೀಪ್ ಪಿ., ಶಾಂತ ಡಿ.ಎಸ್., ರೇಖಾ ಎನ್.ಆರ್., ಸವಿತಾ ಕಾಟ್ವೆ, ಸಹ ಶಿಕ್ಷಕರಾದ ಬಸವರಾಜ್, ಸುಭಾಷ್ ಓ., ಸೈಯದ ಹಮೀಬಾ, ಸಾಯಿರಾ ಖಾನಮ್, ನೂರ್ ಜಹಾನ್, ಹಮೀದ ಬಾನು, ಹಾಗೂ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಕ್ಕಳ ದಿನಾಚರಣೆ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿದ ವ್ಯಕ್ತಿ ಹಾಗೂ ಸಂಸ್ಥೆಗೆ ಪ್ರಶಸ್ತಿ ಪತ್ರ ನೀಡಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 14 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ
ಸುದ್ದಿದಿನ,ದಾವಣಗೆರೆ:ಗ್ರಂಥಾಲಯ ಇಲಾಖೆಯಿಂದ 2021 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಲೇಖಕರು, ಪ್ರಕಾಶಕರು, ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿದ್ದು ರಾಜ್ಯ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ ಮತ್ತು ದಾವಣಗೆರೆ ಕೇಂದ್ರ ಗ್ರಂಥಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 9 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ6 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ
-
ದಿನದ ಸುದ್ದಿ6 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ6 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ