ದಿನದ ಸುದ್ದಿ
ದಾವಣಗೆರೆ | ಇದ್ದೊಬ್ಬ ಮಗನ ಎರಡೂ ಕಿಡ್ನಿ ಫೇಲ್ ; ಧನ ಸಹಾಯಕ್ಕಾಗಿ ಕಣ್ಣೀರಿಟ್ಟ ತಾಯಿ : ದಯವಿಟ್ಟು ಸಹಕರಿಸಿ
ಸುದ್ದಿದಿನ, ದಾವಣಗೆರೆ : ಅವರದ್ದು ಕಡು ಬಡತನದ ಕುಟುಂಬ, ಇಬ್ಬರು ಮಕ್ಕಳಲ್ಲಿ ಒಬ್ಬನನ್ನು ಕಳೆದುಕೊಂಡಿದ್ದ ಆ ತಂದೆ ತಾಯಿ ಇನ್ನೊಬ್ಬ ಮಗನಾದ್ರು ಚೆನ್ನಾಗಿ ಓದಿ ಒಳ್ಳೆಯ ಕೆಲಸ ತಗೋಬೇಕು ಅಂತಾ ಕೂಲಿ ನಾಲಿ ಮಾಡಿ ಅವನನ್ನು ಎಂಎ, ಬಿಎಡ್ ಓದಿಸಿದ್ರು.
ಅವನು ಸಹ ಅತೀ ಹೆಚ್ಚು ಅಂಕ ಪಡೆದು ಸಿಇಟಿಗೆ ಓದುತ್ತಿದ್ದ ಜೊತೆಗೆ ಮನೆಲಿ ಕೂರುವುದು ಬೇಡ, ತಂದೆ ತಾಯಿಗೆ ಆಸರೆಯಾಗೋಣ ಅಂತ ಆತ ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ, ಆದರೆ ದುರಾದೃಷ್ಟ ಆತನ ಎರಡು ಕಿಡ್ನಿ ಫೇಲ್ ಆಗಿದ್ದು, ಇತ್ತ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಆ ತಂದೆ ತಾಯಿ ಕಣ್ಣಿರು ಇಡುತ್ತಿದ್ದಾರೆ.
ಇದನ್ನೂ ಓದಿ | ಸಿಡಿ ಪ್ರಕರಣ | ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ : ಸಿದ್ದರಾಮಯ್ಯ
ಊಟ ನೀರು ಸೇರದೇ ಹಾಸಿಗೆ ಹಿಡಿದಿರುವ ಯುವಕ, ಮಗನ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವ ತಂದೆ ತಾಯಿ.. ಈ ಮನಕುಲ ದೃಶ್ಯ ಕಂಡು ಬಂದಿದ್ದು, ದಾವಣಗೆರೆ ತಾಲ್ಲೂಕಿನ ಮಾಳಗೊಂಡನಹಳ್ಳಿಯಲ್ಲಿ, ಹೌದು.. ಮಾಳಗೊಂಡನಹಳ್ಳಿಯ ಪರಶುರಾಮಪ್ಪ ಹಾಗೂ ಅನುಸೂಯಮ್ಮ ದಂಪತಿಯ ಪುತ್ರ 26 ವರ್ಷದ ಕಲ್ಲೇಶ್, ಓದಿನಲ್ಲಿ ತುಸು ಮುಂದು ಈಗಾಗಿಯೇ ಕಲ್ಲೇಶನನ್ನು ಹೇಗಾದರು ಮಾಡಿ ಓದಿಸಬೇಕು ಎಂದು ಕೂಲಿ ಮಾಡಿ ಹಣ ಕೂಡಿಟ್ಟು ಬಿಎಡ್, ಎಂಎ ಓದಿಸಿದ್ರು.
ಕಲ್ಲೇಶ್ ಓದಿನಲ್ಲಿಮುಂದೆ ಇದ್ದ ಕಾರಣ ಉತ್ತಮ ಅಂಕ ಪಡೆದಿದ್ದ, ಬಳಿಕ ಮನೆಯ ಪರಿಸ್ಥಿತಿ ಸರಿ ಇಲ್ಲದ ಹಿನ್ನಲೆ ಕಲ್ಲೇಶ್ ಸಿಇಟಿ, ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ, ಆದರೆ ಅದೊಂದು ದಿನ ಹೊಟ್ಟೆ ತಳ ಭಾಗ ನೋವ್ವ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ತೋರಿಸಿದಾಗ ಕುಟುಂಬಕ್ಕೆ ಬರಸಿಡಿಲು ಸುದ್ದಿ ಬಡಿದಿತ್ತು, ಅದುವೇ ಕಲ್ಲೇಶನಿಗೆ ಎರಡು ಕಿಡ್ನಿ ಫೇಲ್ ಎಂದು ವೈದ್ಯರು ಶಾಕಿಂಗ್ ನ್ಯೂಸ್ ಕೊಟ್ಟಿದ್ರು.
ಇನ್ನು ಕಲ್ಲೇಶ್, ಯಾವೂದೇ ಕುಡಿತ, ಗುಟ್ಕ ಮುಟ್ಟಿದವನಲ್ಲ, ಚಿಕ್ಕವನಿದಾಗ ಕಿಡ್ನಿಯಲ್ಲಿ ಕಲ್ಲು ಇತ್ತಂತೆ ಇದನ್ನ ಟ್ರಿಟ್ ಮೆಂಟ್ ಮೂಲಕವೇ ಕರಗಿಸುತ್ತೇವೆ ಎಂದು ವೈದ್ಯರು ಚಿಕಿತ್ಸೆ ನೀಡಿದ್ದರಂತೆ, ಅದಾದ ಬಳಿಕ ಹುಷಾರಾಯಿತು ಅಂತ ಸುಮ್ಮನಿದ್ದ ಕಲ್ಲೇಶ್ ಗೆ ಹಲವು ವರ್ಷಗಳ ಬಳಿಕ ಈಗ ಕಿಡ್ನಿ ಫೇಲ್ ಆಗಿರುವ ಸಂಗತಿ ತಿಳಿದಿದೆ, ಇನ್ನೂ ಇಬ್ಬರು ಮಕ್ಕಳಲ್ಲಿ ಒಬ್ಬ ಜಾಂಡಿಸ್ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾನೆ.
ಈಗ ಇರುವುದು ಇವನೊಬ್ಬ, ಇವನಿಗೂ ಇದೇ ಪರಿಸ್ಥಿತಿ ಬಂದಿದೆ.. ನನ್ನ ಕಿಡ್ನಿ ಇವನಿಗೆ ಹೊಂದುತ್ತಂತೆ, ಆದರೆ ಬದಲಾಯಿಸಲು ೧೫ ರಿಂದ ೨೦ ಲಕ್ಷ ರೂಪಾಯಿ ಖರ್ಚಾಗುತ್ತೆ ಅಂತಾ ಡಾಕ್ಟರ್ ತಿಳಿಸಿದ್ದಾರೆ, ಇದ್ದ ಬದ್ದ ಹಣವನ್ನೆಲ್ಲ ಡಯಾಲಿಸಿಸ್ ಮಾಡಿಸಲು ಆಸ್ಪತ್ರೆಗೆ ಖರ್ಚಾಗಿದೆ, ಯಾರಾದ್ರು ಸಹಾಯ ಮಾಡಿ ಮಗನ ಉಳಿಸಿಕೊಡಿ ಅಂತಾ ತಾಯಿ ಅನುಸೂಯಮ್ಮ ಕಣ್ಣೀರಿಟ್ಟಿದ್ದಾರೆ.
ಒಟ್ಟಾರೆ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಬಡ ದಂಪತಿಗಳು ಹರಸಾಹಸ ಪಡ್ತಾ ಇದ್ದಾರೆ, ಕಿಡ್ನಿ ಕೊಡಲು ರೆಡಿ ಇದ್ದರು ಬದಲಾಯಿಸಲು ಹಣವಿಲ್ಲ,,ಹೀಗಾಗಿ ಇವರಿಗೆ ಸಹಾಯ ಮಾಡುವವರು ಅಕೌಂಟ್ ನಂಬರ್ ಕೆಳಗಿನಂತೆ
NAME- KALLLESH. P
ACOUNT NOMBR-34869949662
IFSC- SBIN0005624
BRANCH CODE- 5624
G pay-phone pay
Mob: 9845601182 ಗೂ ಧನ ಸಹಾಯ ಮಾಡಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


