Connect with us

ದಿನದ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ‍್ಕಾರದ ಕರ‍್ಯರ‍್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ‍್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತಗಟ್ಟೆಗಳ ಪುನರ್ ವಿಂಗಡಣೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ‍್ಯಗಳಾದ ರ‍್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ‍್ಯ ಸುಲಭವಾಗುತ್ತದೆ. ಹೆಸರು ಸರ‍್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ‍್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.

ಕ್ಷೇತ್ರದ ಮತದಾರರ ವಿವರ

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಲಿಂಗ ಅನುಪಾತ

ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು

ಯುವ ಮತದಾರರು, 18-19 ರ‍್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.

20-29 ರ‍್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ‍್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ‍್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ‍್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.

ಹಿರಿಯ ನಾಗರಿಕರು

60-69 ರ‍್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ‍್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.

80 ರ‍್ಷ ಮೇಲ್ಪಟ್ಟವರು

ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

Published

on

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೂಚಿಸಿದರು.

ಅವರು ಭಾನುವಾರ ಪಾಷನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಬ್ದುಲ್ ರೆಹಮಾನ್ ಎಂಬ 4 ತಿಂಗಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ಸೇರಿದಂತೆ ಎಲ್ಲಾ ಭಾಗಗಳ ಅರ್ಹ ಮಕ್ಕಳಿಗೂ ಲಸಿಕೆ ತಲುಪಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅವರು ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಆರೋಗ್ಯ ಇಲಾಖೆ ಪಣತೊಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 18,28,153 ಜನಸಂಖ್ಯೆಯಿದ್ದು, 3,79,338 ಮನೆಗಳಿವೆ. ಇವುಗಳಲ್ಲಿ ಗುರುತಿಸಲಾಗಿರುವ 5 ವರ್ಷದ ಒಳಗಿನ 1,37,339 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಇದಕ್ಕಾಗಿ ಜಿಲ್ಲಾದ್ಯಂತ 1,090 ಲಸಿಕಾ ಬೂತ್ಗಳನ್ನು ಸ್ಥಾಪಿಸಲಾಗಿದೆ. ಬೂತ್ಗಳಲ್ಲಿ ಲಸಿಕೆ ಹಾಕುವುದರ ಜೊತೆಗೆ, ಜೂನ್ 29 ರಿಂದ ಜುಲೈ 1 ರವರೆಗೆ ಒಟ್ಟು 3 ದಿನಗಳ ಕಾಲ ಜಿಲ್ಲೆಯ ಎಲ್ಲಾ ಮನೆ-ಮನೆಗೆ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯಕ್ರಮವನ್ನು 2 ಹಂತಗಳಲ್ಲಿ 3 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಲಸಿಕಾ ಅಭಿಯಾನದ ಯಶಸ್ಸಿಗಾಗಿ ಮನೆ-ಮನೆ ಭೇಟಿ ತಂಡ, ಟ್ರಾನ್ಸಿಸ್ಟ್ (ಸಾರಿಗೆ ನಿಲ್ದಾಣಗಳ ತಂಡ) ಮತ್ತು ಸಂಚಾರಿ (ಮೊಬೈಲ್) ತಂಡ ಹೀಗೆ ಮೂರು ಪ್ರಮುಖ ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ನಿಯೋಜಿತ ಸಿಬ್ಬಂದಿ ಹಾಗೂ ಮೇಲ್ವಿಚಾರಕರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದು, ವಲಸೆ ಕಾರ್ಮಿಕರ ಮಕ್ಕಳು, ಹರವಿಗಿ ಹೋಗುವ ಕುಟುಂಬಗಳ ಮಕ್ಕಳು ಸೇರಿದಂತೆ ಒಂದೂ ಮಗುವು ಲಸಿಕೆಯಿಂದ ವಂಚಿತವಾಗದಂತೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದರು.

ಡಾ. ರೇಣುಕಾರಾಧ್ಯ ಆರ್.ಸಿ.ಹೆಚ್.ಒ ಅವರು ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲಾಗಿದೆ ಆದರೆ ಪ್ರಸ್ತುತ ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ 5 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿನ ನಾಗರಿಕರು ಭಾರತಕ್ಕೆ ಬಂದು ಹೋಗುವ ಸಾಧ್ಯತೆ ಇರುವುದರಿಂದ, ವೈರಸ್ ಮತ್ತೆ ಇಲ್ಲಿ ಹರಡಬಾರದು ಎಂಬ ಮುಂದಾಲೋಚನೆಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಈ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ನೊಡೆಲ್ ಅಧಿಕಾರಿ ಡಾ.ಚಂದ್ರಶೇಖರ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending