Connect with us

ದಿನದ ಸುದ್ದಿ

ದಾವಣಗೆರೆ ತಂಬಾಕು ಮುಕ್ತ ನಗರ : ಅಧಿಕಾರಿಗಳಿಗೆ ಸನ್ಮಾನ

Published

on

ಸುದ್ದಿದಿನ, ದಾವಣಗೆರೆ : “ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ(ಕೋಟಾ)-2003” ರ ಅಡಿಯಲ್ಲಿ ದಾವಣಗೆರೆ ನಗರ ಶೇಕಡಾ 90 ರಷ್ಟು ಅನುಷ್ಠಾನ ಹೊಂದಿರುವ ಪ್ರಯುಕ್ತ ‘ತಂಬಾಕು ಮುಕ್ತ ದಾವಣಗೆರೆ ನಗರ’ ವನ್ನಾಗಿ ಘೋಷಿಸಿದ್ದು, ಇದಕ್ಕೆ ಶ್ರಮಿಸಿದ ಅಂತರ ಇಲಾಖೆ ಅಧಿಕಾರಿಗಳಿಗೆ ಇದೇ ವೇಳೆ ಗೌರವ ಸ್ಮರಣಿಯನ್ನು ನೀಡಿ ಸನ್ಮಾನಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ಜ.26 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಕೋಶದ ಉಪಾಧ್ಯಕ್ಷರಾದ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜೀವ್, ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿಗಳು ಹಾಗೂ ಕೋಶದ ನೋಡಲ್ ಅಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್, ಮಹಾನಗರಪಾಲಿಕೆಯ ಆಯುಕ್ತ ವಿಶ್ವನಾಥ ಮುದಜ್ಜಿ, ಅಬಕಾರಿ ಇಲಾಖೆಯ ಉಪ ಆಯುಕ್ತರು, ನಗರ ಪೊಲೀಸ್ ಇಲಾಖೆಯ ಉಪಾಧೀಕ್ಷಕರು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ಕಾರ್ಯಕ್ರಮಾಧಿಕಾರಿಗಳು, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಾರ್ತಾ ಮತ್ತು ಪ್ರಸಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಇವರಿಗೆ ಗೌರವ ಸ್ಮರಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಿದ್ದರು, ಸಂಸದರಾದ ಜಿ.ಎಂ.ಸಿದ್ದೇಶ್ವರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಾಂತಕುಮಾರಿ ಕೆ.ವಿ, ಮಹಾನಗರಪಾಲಿಕೆ ಮಹಾಪೌರರಾದ ಬಿ.ಜಿ.ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್, ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಎಂ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ ಪದ್ಮ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending