ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ : ವಿವಿಧ ಸ್ನಾತಕೋತ್ತರ ಕೋರ್ಸುಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ವರ್ಷ 2020-21ನೇ ಸಾಲಿನ ವಿವಿಧ ಸ್ನಾತಕೋತ್ತರ ಅಧ್ಯಯನ ವಿಷಯಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 9 ನೇ ತಾರೀಖಿನಿಂದ ಪ್ರವೇಶಾತಿ ಆರಂಭವಾಗಿದ್ದು, ಕೊರೋನಾ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಅಭ್ಯರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.davangereuniversity.ac.in ಮೂಲಕ
ಅರ್ಜಿಸಲ್ಲಿಸಬಹುದಾಗಿದೆ.
ಅಂತಿಮ ವರ್ಷದ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆ
ಅಂತಿಮ ವರ್ಷದ ಸ್ನಾತಕ ಪದವಿ ಪರೀಕ್ಷೆಯ ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳೂ ಕೂಡ www.davangereuniversity.ac.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243