Connect with us

ದಿನದ ಸುದ್ದಿ

ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಂಭ್ರಮ :‌ ವಧು-ವರರನ್ನು ಹಾರೈಸಿದ ಡಿಸಿ, ಸಿಇಒ

Published

on

ಸುದ್ದಿದಿನ,ದಾವಣಗೆರೆ : ಇಲ್ಲಿನ ಶ್ರೀ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯವು ಬುಧವಾರ ತಳಿರು ತೋರಣಗಳಿಂದ ಅಲಂಕಾರಗೊಂಡಿತ್ತು. ಮಂಗಳವಾದ್ಯ ಮೊಳಗಿತ್ತು. ಸ್ವಾಗತ ಕೋರಲು ಮಂಟಪದವರೆಗೂ ರಂಗೋಲಿ ಹಾಕಲಾಗಿತ್ತು. ದೈನಂದಿನ ಕಚೇರಿ ಕೆಲಸದಲ್ಲಿ ನಿರತರಾಗುತ್ತಿದ್ದ ಮಹಿಳಾ ನಿಲಯದ ಅಧಿಕಾರಿಗಳು, ಸಿಬ್ಬಂದಿ ಬಣ್ಣಬಣ್ಣದ ಸೀರೆ ಉಟ್ಟು ಸಂಭ್ರಮದಲ್ಲಿ ಓಡಾಡುತ್ತಿದ್ದರು. ಇದಕ್ಕೆ ಕಾರಣ ಮಹಿಳಾ ವಸತಿ ನಿಲಯದ ಮಗಳು ಸೌಮ್ಯ.ಕೆ.ಎಂ ಅವರ ವಿವಾಹ ಮಹೋತ್ಸವ.

ಮಹಿಳಾ ನಿಲಯದ ನಿವಾಸಿ ಸೌಮ್ಯ.ಕೆ.ಎಂ ಅವರ ಪೋಷಕರ ಸ್ಥಾನದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಿಇಒ ವಿಜಯಮಹಾಂತೇಶ ಬಿ. ದಾನಮ್ಮನವರ್, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ರಾಜ್ಯ ಬಾಲ ಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜಪ್ಪ ಅವರುಗಳು ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನ ಕಡೆಗೋಡಿ ಗ್ರಾಮದ ಸುಬ್ರಾಯ ಮಂಜುನಾಥ ಭಟ್ಟ ಅವರಿಗೆ ಧಾರೆ ಎರೆದುಕೊಟ್ಟರು.

ಇದನ್ನೂ ಓದಿ | ಮಾ.18 ರಂದು ಚನ್ನಗಿರಿಗೆ ಎಸಿಬಿ ಭೇಟಿ

ವಧು ವರರು ಮದುವೆಯ ಉಡುಗೆ ತೊಟ್ಟು ತಯಾರಾದ ಬಳಿಕ ನಿಲಯದ ಕೊಠಡಿಯಲ್ಲಿ ಗಣಪತಿ ದೇವರಿಗೆ ಕೈಮುಗಿದರು. ಅಲ್ಲಿಂದ ವೇದಿಕೆಗೆ ಡಿಸಿ, ಸಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ಮಹಿಳೆಯರ ಜತೆಗೆ ವಧು-ವರರನ್ನು ಮಂಟಪಕ್ಕೆ ಕರೆತಂದರು.

ಬೆಳಗ್ಗೆ 11 ರಿಂದ 11.45 ರವರೆಗಿನ ಶುಭ ಮುಹೂರ್ತದಲ್ಲಿ ವರನಿಂದ ವಧುವಿಗೆ ಮಾಂಗಲ್ಯಧಾರಣೆ ಇತರೆ ಶಾಸ್ತ್ರಗಳು ನೆರವೇರಿದವು. ಪರಸ್ಪರ ಹಾರ ಬದಲಾಯಿಸಿಕೊಂಡಾಗ ನೆರೆದಿದ್ದ ಎಲ್ಲರೂ ಅಕ್ಷತೆ ಹಾಕಿ ಹರಿಸಿದರು. ಅನಾಥೆಯಾದ ಸೌಮ್ಯ ಗೆ ಸಂಬಂಧಿಕರು ಇಲ್ಲದ ಪರಿಣಾಮ ವಸತಿ ನಿಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಪೋಷಕರು ಹಾಗೂ ಸಂಬಂಧಿಕರ ಸ್ಥಾನದಲ್ಲಿ ನಿಂತು ಮದುವೆ ನೆರವೇರಿಸಿಕೊಟ್ಟರು.

ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನ ಕಡೆಕೋಡಿ ಗ್ರಾಮದ ಮಂಜುನಾಥ ಭಟ್ಟ ಹಾಗೂ ಕಮಲಮ್ಮ ಅವರ ಜೇಷ್ಠ ಪುತ್ರನಾದ ಸುಬ್ರಾಯ ಮಂಜುನಾಥ ಭಟ್ಟ ಈ ಯುವತಿಯನ್ನು ಮದುವೆಯಾಗಲು ಮುಂದೆ ಬಂದಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದರು. ಸುಬ್ರಾಯ ಮಂಜುನಾಥ ಭಟ್ಟ ಖಾಸಾಗಿ ಸಂಸ್ಥೆಯೊಂದರಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಜಗಳೂರು ತಾಲ್ಲೂಕಿನ ಗೊಲ್ಲರಹಟ್ಟಿಯಲ್ಲಿ ಅತ್ಯಾಚಾರ ಸಂತ್ರಸ್ಥೆ ಮೂಕ ಯುವತಿಗೆ ಜನಿಸಿ, ಬಹಿಷ್ಕಾರಕ್ಕೆ ಒಳಗಾಗಿದ್ದ ಮಗುವಿಗೆ ಮಹಿಳಾ ನಿಲಯದಲ್ಲಿ ಶ್ರೀ ಕೃಷ್ಣ ಎಂದು ನಾಮಕಾರಣ ಮಾಡಲಾಗಿತ್ತು. ಇದೀಗ ಈ ಮಗುವಿಗೆ 2.5 ವರ್ಷ ತುಂಬಿದ್ದರಿಂದ ಡಿಸಿ ಹಾಗೂ ಸಿಇಒ ನೇತೃತ್ವದಲ್ಲಿ ಜವಳ ಶಾಸ್ತ್ರ ನೆರವೇರಿಸಲಾಯಿತು.

ನೂತನ ದಂಪತಿಗಳು ವಿವಾಹ ಜೀವನಕ್ಕೆ ಕಾಲಿರಿಸಿದ ಸಂಭ್ರಮಕ್ಕೆ ಸಾಕ್ಷಿಯಾದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕನ್ಯಾದಾನ ಮಾಡಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿ, ನಾನು ಅಧಿಕಾರಕ್ಕೆ ಬಂದ ಮೇಲೆ ಇದು 6ನೇ ವಿವಾಹ ಮಹೋತ್ಸವ. ಮಹಿಳಾ ನಿಲಯದಲ್ಲಿ 40ನೇ ಮದುವೆ ಇದು. ಹುಡುಗನ ಮನೆ ಕಡೆಯವರು ಸಂಸ್ಕಾರವಂತರು.

ಹುಡುಗ ಖಾಸಾಗಿ ಸಂಸ್ಥೆಯೊಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಹುಡುಗಿ ಪಿಯುಸಿ ಓದು ಮುಗಿಸಿ ಮಹಿಳಾ ನಿಲಯದಲ್ಲಿ ಇದ್ದಾಳೆ. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನವ ಜೋಡಿ ಅನ್ಯೂನ್ಯವಾಗಿ ಪರಸ್ಪರ ಶಾಂತಿ, ಸಂತೋಷದಿಂದ ಬಾಳಲಿ ಎಂದು ಅಕ್ಷತೆಯನ್ನು ಹಾಕಿ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಮಾತನಾಡಿ, ನಾವು ಭಾರತೀಯರು ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತೇವೆ. ಅದರಲ್ಲಿಯೂ ಅನಾಥಾಶ್ರಮದ ಮಗುವೊಂದಕ್ಕೆ ಅದ್ದೂರಿಯಾಗಿ ವಿವಾಹ ಮಾಡುತ್ತಿರುವುದು ಶ್ಲಾಘನೀಯ. ತಂದೆ ತಾಯಿ ಕಳೆದುಕೊಂಡಿರುವ ಈ ಮಕ್ಕಳು ಜಾತಿ ಬಂಧನದಿಂದ ಹೊರಗಿದ್ದಾರೆ. ಉಳಿದವರು ಜಾತಿ ಸಂಕುಚಿತ ಸಂಕೋಲೆಯಲ್ಲಿರಬೇಕಾಗುತ್ತದೆ.

ಅನಾಥ ಮಕ್ಕಳನ್ನು ಮದುವೆಯಾಗಲು ಮುಂದೆ ಬಂದಿರುವವರಿಂದಲೇ ದೇಶ ಕಟ್ಟಲು ಸಾಧ್ಯ. ಇವರಿಂದಲೇ ಇಂದು ಮಾನವೀಯ ಮೌಲ್ಯಗಳು ಉಳಿಯುತ್ತಿವೆ. ಇಂತಹ ಮಾನವೀಯ ಕಾರ್ಯದಲ್ಲಿ ನಾನು ಭಾಗವಹಿಸಿರುವುದು ಧನ್ಯ ಎಂದರು.

ಸಿಇಒ ವಿಜಯಮಹಾಂತೇಶ ಬಿ.ದಾನಮ್ಮನವರ್ ಮಾತನಾಡಿ, ಮಧ್ಯಮ ವರ್ಗದ ಜನರು ಸಹ ಈ ರೀತಿಯಾಗಿ ಮದುವೆ ಮಹೋತ್ಸವವನ್ನು ಮಾಡುವುದಿಲ್ಲ. ಮಹಿಳಾ ನಿಲಯದ ಸಹಯೋಗದೊಂದಿಗೆ ಸರ್ಕಾರವು ಅನಾಥ ಹೆಣ್ಣು ಮಕ್ಕಳಿಗೆ ವಿಜೃಂಭಣೆಯಿಂದ ಮದುವೆ ಮಾಡಿಕೊಡುವುದು ಅಭಿನಂದನಾರ್ಹ. ಇಂತಹ ಸತ್ಕಾರ್ಯ ನಡೆಸುವ ಅವಕಾಶ ಸಿಕ್ಕಿರುವುದು ನಮಗೆ ಗೌರವ, ಹೆಮ್ಮೆ, ಹಾಗೂ ಸೌಭಾಗ್ಯವಾಗಿದೆ ಎಂದು ಹೇಳಿದರು. ದಂಪತಿಗಳು ಸುಖದಿಂದ ಬಾಳಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ರಾಜ್ಯ ಮಹಿಳಾ ನಿಲಯದ ಅಧೀಕ್ಷಕರಾದ ನಾಗರತ್ನಮ್ಮ, ರಾಜ್ಯ ಮಹಿಳಾ ನಿಲಯದ ಲೆಕ್ಕಿಗರಾದ ಸುಜಾತಮ್ಮ, ಬಾಲಕಿಯರ ಬಾಲ ಭವನದ ಅಧಿಕ್ಷಕರಾದ ಶೋಭಾ, ಕೌಟುಂಬಿಕ ಸುರಕ್ಷಿತಾಧಿಕಾರಿ ಸುಶೀಲಮ್ಮ, ಜಿಲ್ಲಾ ನಿರೂಪಣಾಧಿಕಾರಿ ಗಿರಿಜಮ್ಮ ಸೇರಿದಂತೆ ಜಿಲ್ಲೆಯ ಎಲ್ಲಾ ಸಿಡಿಪಿಒ ಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending