ದಿನದ ಸುದ್ದಿ

ದಾವಣಗೆರೆ | 10 ಕೆಎಲ್ ಆಕ್ಸಿಜನ್ ಘಟಕ ಮಂಜೂರು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದೇಶದ 38 ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ 10 ಕೆ.ಎಲ್. ಸಾಮಥ್ರ್ಯದ ವೈದ್ಯಕೀಯ ಬಳಕೆಯ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಈ ಪೈಕಿ ದಾವಣಗೆರೆ ಜಿಲ್ಲೆಗೂ ಮಂಜೂರು ಮಾಡಲಾಗಿದೆ. 86 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಈ ಕುರಿತು ಆಕ್ಸಿಜನ್ ಘಟಕ ಪೂರೈಸುವ ಕಂಪನಿ ಅಧಿಕಾರಿಗಳನ್ನು ಈಗಾಗಲೆ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನು 30 ದಿನಗಳೊಳಗೆ ಈ ಆಕ್ಸಿಜನ್ ಘಟಕ ಬಳಕೆಗೆ ಲಭ್ಯವಾಗುವಂತೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಆದಷ್ಟು ಶೀಘ್ರ ಇದನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನ ಕೈಗೊಳ್ಳಬೇಕು. ರಾಜ್ಯದ ಗಣಿಗಾರಿಕೆ ಮತ್ತು ಭೂವಿಜ್ಞಾನ ಸಚಿವರು ಕೂಡ ಆಕ್ಸಿಜನ್ ಟ್ಯಾಂಕರ್ ಒಂದನ್ನು ಜಿಲ್ಲೆಗೆ ಒಂದು ವಾರದೊಳಗಾಗಿ ನೀಡುವ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ | ಚಿಗಟೇರಿ ಜಿಲ್ಲಾ ಆಸ್ಪತ್ರೆ ಇನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆ 

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಯ ಪಾಲಿಗೆ ಇದು ಒಳ್ಳೆಯ ಸಂಗತಿಯಾಗಿದ್ದು, ಅಧಿಕಾರಿಗಳು ಸಂಸದರ ಮಾರ್ಗದರ್ಶನದಲ್ಲಿ ಆದಷ್ಟು ಶೀಘ್ರ ಹೊಸ ಆಕ್ಸಿಜನ್ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶಿಸಿದರು.

ಕೆಎಸ್‍ಎಸ್‍ಡಿಎಲ್ ಅಧ್ಯಕ್ಷರು ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಮಾತನಾಡಿ, ಕೆಎಸ್‍ಎಸ್‍ಡಿಎಲ್‍ನ ಸಿಎಸ್‍ಆರ್ ನಿಧಿ ವಿನಿಯೋಗಿಸಿ, ಚನ್ನಗಿರಿಯಲ್ಲಿ ಆಕ್ಸಿಜನ್ ಘಟಕ ಮಾಡಲು ನಿರ್ಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಚಿವರು ಪ್ರತಿಕ್ರಿಯಿಸಿ, ಇದಕ್ಕೆ ಅನುಮತಿ ನೀಡುವುದೂ ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version