ದಿನದ ಸುದ್ದಿ

ದಾವಣಗೆರೆ | ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ :ಲಾಕ್‍ಡೌನ್ ಕಾರಣದಿಂದ ಜಿಲ್ಲೆಯಲ್ಲಿ ಕೆಲ ಹಕ್ಕಿಪಿಕ್ಕಿ ಕುಟುಂಬದವರು ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಖುದ್ದು ಮುಖ್ಯಮಂತ್ರಿಗಳೇ ಕರೆ ಮಾಡಿ, ಆ ಕುಟುಂಬಗಳಿಗೆ ನೆರವು ನೀಡುವಂತೆ ಸೂಚಿಸಿದ್ದರು. ಪರಿಶೀಲಿಸಿದಾಗ, ಅಲೆಮಾರಿಯ 35 ಕುಟುಂಬದ 130 ಜನರು ಕಷ್ಟಕ್ಕೆ ಸಿಲುಕಿದ್ದು ಕಂಡುಬಂತು, ಹೀಗಾಗಿ ತಕ್ಷಣವೇ ಅವರಿಗೆ ಆಹಾರದ ಕಿಟ್ ಪೂರೈಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಲ್ಲದೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕಂಡುಬಂದ ಇಂತಹ 421 ಕುಟುಂಬಗಳಿಗೆ ಈಗಾಗಲೆ ಆಹಾರದ ಕಿಟ್ ವಿತರಣೆ ಮಾಡಿದ್ದೇವೆ, ಅಗತ್ಯ ಬಿದ್ದಲ್ಲಿ ಇನ್ನಷ್ಟು ಪೂರೈಸುವ ಭರವಸೆ ನೀಡಲಾಗಿದೆ ಎಂದರು.

ಇದನ್ನೂ ಓದಿ | ರಾಜ್ಯದ ಎಲ್ಲಾ ಸಚಿವರ ವರ್ಷದ ವೇತನವನ್ನು ಕೊರೋನಾ ಪರಿಹಾರ ನಿಧಿಗೆ ನೀಡಲು ಸರ್ಕಾರ ಆದೇಶ

ಸಚಿವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಲಾಕ್‍ಡೌನ್ ಕಾರಣದಿಂದಾಗಿ ನಿಜಕ್ಕೂ ಸಂಕಷ್ಟಕ್ಕೆ ಒಳಗಾಗಿರುವ ಬಡವರು, ನಿರ್ಗತಿಕರಿಗೆ ಜಿಲ್ಲಾಡಳಿತದ ವತಿಯಿಂದ ಆಹಾರ ಕಿಟ್ ಹಾಗೂ ಪಡಿತರ ವಿತರಣೆಗೆ ತ್ವರಿತವಾಗಿ ಕ್ರಮ ಜರುಗಿಸಬೇಕು. ಯಾವುದೇ ಬಡವರು ಊಟಕ್ಕಾಗಿ ಪರಿತಪಿಸುವಂತಾಗಬಾರದು ಎಂದು ಸಚಿವರು ಸೂಚನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version