ದಿನದ ಸುದ್ದಿ
ದಾವಣಗೆರೆ | ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ : ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಇಲ್ಲ : ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ: ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ((PHEIC) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯು 2020 ರ ಮಾರ್ಚ್ 11 ರಂದು ಕೋವಿಡ್-19 ನ್ನು ಸರ್ವವ್ಯಾಪಿ ರೋಗ ಎಂದು ನಿರೂಪಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ರೋಗ ತಡೆಗಟ್ಟುವ ಕ್ರಮಗಳನ್ನು ಎಲ್ಲ ರೀತಿಯ ಸರ್ವೇಕ್ಷಣೆಯನ್ನು ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು ಬಲಪಡಿಸಿದೆ.
ಜಿಲ್ಲೆಯಿಂದ ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ : ಮಾರ್ಚ್ 04 ರಿಂದ ಇಲ್ಲಿಯವರೆಗೆ : ಸಂಗ್ರಹ ವರದಿ 25.03.2020
- ಅವಲೋಕನೆಗಾಗಿ ಪಟ್ಟಿ ಮಾಡಲ್ಪಟ್ಟವರು 35 324
- 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದವರು 00 01
- 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದವರು 30 81
- ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 03 244
- ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 06 22
- ನಮ್ಮ ಜಿಲ್ಲೆಯಿಂದ ಹೊರ ದೇಶಗಳಿಗೆ ಹೋದವರು (ಅಲ್ಲಿಯೇ ನೆಲೆಸಿರುವವರು) 00 09
- ನಮ್ಮ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಹೋದವರು (ಬೇರೆ ದೇಶಕ್ಕೆ ಹೋಗಿ ಬಂದವರು) 02 15
- ಪರೀಕ್ಷೆ ಮಾಡಲು ಸಂಗ್ರಹಿಸಲಾದ ಒಟ್ಟು ಮಾದರಿಗಳು 05 27
- ನೆಗೆಟಿವ್ ಎಂದು ವರದಿಯಾದ ಒಟ್ಟು ಫಲಿತಾಂಗಳು 00 21
- ಖಚಿತಪಟ್ಟ ಫಲಿತಾಂಶಗಳು 00 00
ಇದುವರೆಗೆ ಜಿಲ್ಲೆಯಲ್ಲಿ ಈ ದಿನದವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. 2020 ರ ಮಾರ್ಚ್ 04 ರಿಂದ ಇದುವರೆಗೆ 324 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದು, ಒಬ್ಬರು 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಹಾಗೂ 81 ಜನರು 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 244 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, 22 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.
ಹೊರದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಿದೇಶಿಗರು ಜಿಲ್ಲೆಗೆ ಬಂದು ಮತ್ತೆ ಹೊರದೇಶಗಳಿಗೆ ಇದುವರೆಗೆ 09 ಜನರು ತೆರಳಿದ್ದಾರೆ. ವಿದೇಶಗಳಿಗೆ ಭೇಟಿ ನೀಡಿ ನಮ್ಮ ಜಿಲ್ಲೆಗೆ ಬಂದು ಇತರೆ ಜಿಲ್ಲೆಗಳಿಗೆ ಇದುವರೆಗೆ 15 ಜನ ತೆರಳಿರುತ್ತಾರೆ. ಕೊರೋನಾ ವೈರಸ್ ಪರೀಕ್ಷೆಗಾಗಿ 27 ಮಾದರಿಗಳನ್ನು ಇದುವರೆಗೆ ಕಳುಹಿಸಲಾಗಿದ್ದು, 21 ಮಾದರಿಗಳು ನೆಗೆಟಿವ್ ಎಂದು ಫಲಿತಾಂಶ ಬಂದಿರುತ್ತದೆ. ಇದುವರೆಗೆ ಯಾವುದೇ ಖಚಿತಪಟ್ಟ ಪ್ರಕರಣಗಳು ಇರುವುದಿಲ್ಲ.
ಸಾರ್ವಜನಿಕರಿಗೆ ಮನವಿ
ಕೊವಿಡ್-19 ಪೀಡಿತ ಪ್ರದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು. ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಅಥವಾ 104 ಸಹಾಯವಾಣಿಗೆ ಕರೆ ಮಾಡುವುದು. ವೈಯುಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ, ಕೈ ಸಚ್ಚಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವಿಕೆಯನ್ನು ಮಾಡಬಾರದು.
ಎಲ್ಲಾ ರೀತಿಯ ಮಾರ್ಗಸೂಚಿಗಳು ಮತ್ತು ಸಲಹೆಗಳು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಜಾಲತಾಣದಲ್ಲಿ ಲಭ್ಯವಿದ್ದು, ಜಾಲತಾಣದ ವಿಳಾಸ https://karunadu.karnataka.gov.in/hfw/kannada/pages/nCov-iec.aspx ಇಲ್ಲಿ ಪಡೆಯ ಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
AI ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ ಪ್ರಕಟ
ಸುದ್ದಿದಿನಡೆಸ್ಕ್:ಕೃತಕ ಬುದ್ಧಿಮತ್ತೆ ವಲಯದಲ್ಲಿ ಜಗತ್ತಿನ ನೂರು ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಪತ್ರಿಕೆ ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ವೈಷ್ಣವ್ ಅವರನ್ನು ಶಾರ್ಪರ್ ವರ್ಗದಲ್ಲಿ ಹೆಸರಿಸಲಾಗಿದ್ದು, ಅವರ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕ್ಷೇತ್ರದ ಮೊದಲ 5 ದೇಶಗಳಲ್ಲಿ ಭಾರತ ಸ್ಥಾನ ಪಡೆಯುವ ಆಶಯದಲ್ಲಿದೆ ಎಂದು ಟೈಮ್ ಮ್ಯಾಗ್‌ಜೀನ್ ಬರೆದಿದೆ.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿಸುವ ಪ್ರಯತ್ನದಲ್ಲಿ ಸಚಿವರು ನಿರ್ವಹಿಸಿದ ಮಹತ್ವದ ಪಾತ್ರದ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿ ಅವರ ಹೆಸರು ನಮೂದಿತವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ಕೊಡುಗೆ ನೀಡಿದ ಇನ್ಫೋಸೀಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ, ಸಿಇಓಗಳಾದ ಗೂಗಲ್‌ನ ಸುಂದರ್ ಪಿಚಾಯಿ, ಮೈಕ್ರೋಸಾಫ್ಟ್‌ನ ಸತ್ಯ ನಾದೆಲ್ಲಾ, ಓಪನ್‌ಎಐ ನ ಸ್ಯಾಮ್ ಅಲ್ಟ್‌ಮನ್, ಮೆಟಾದ ಮಾರ್ಕ್ ಝುಕೇರ್‌ಬರ್ಗ್ ಟೈಮ್ ಪ್ರಕಟಿಸಿದ ಪಟ್ಟಿಯಲ್ಲಿ ಸೇರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಜಧಾನಿಯಲ್ಲಿ ಅಪಾಯಕಾರಿ ಮರಗಳನ್ನು ಕತ್ತರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಸುದ್ದಿದಿನಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ವಿದೇಶ ಪ್ರವಾಸಕ್ಕೂ ಮುನ್ನ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಸಭೆ ನಡೆಸಿದ ಅವರು ಸರಿಯಾಗಿ ಕಾರ್ಯನಿವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತಿಳಿಸಿದ ಅವರು, ಅಪಾಯಕಾರಿ ಮರಗಳಿದ್ದರೆ, ಕತ್ತರಿಸುವಂತೆ ಸೂಚಿಸಿದ್ದಾರೆ.
ಯಾವುದೇ ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್, ಬಿಎಂಆರ್ಡಿಎ ಆಯುಕ್ತ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ
ಸುದ್ದಿದಿನಡೆಸ್ಕ್:ಮಹದಾಯಿ ವಿಚಾರದಲ್ಲಿ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆಯ ಹಿನ್ನಡೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ. ಜುಲೈನಲ್ಲಿ ನಡೆದ ಸಭೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಜನರ ಹಿತ ಕಾಪಾಡಲು ಬದ್ಧ ಎಂದು ಹೇಳಿದ್ದಾರೆ. ಮಹದಾಯಿ ಕೇವಲ ಗೋವಾ ಸಂಬಂಧಿ ಯೋಜನೆ ಅಲ್ಲ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
-
ದಿನದ ಸುದ್ದಿ4 days ago
ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ
-
ದಿನದ ಸುದ್ದಿ5 days ago
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ
-
ದಿನದ ಸುದ್ದಿ3 days ago
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
-
ದಿನದ ಸುದ್ದಿ4 days ago
ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ
-
ದಿನದ ಸುದ್ದಿ4 days ago
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು