Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯಲ್ಲಿ ಮಾ.29 ರಂದು ದೃಢಪಟ್ಟ ಮತ್ತೊಂದು ಕೋವಿಡ್-19 ಪ್ರಕರಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲ್ಲ್ಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇರುತ್ತಾರೆ. ಮಾ. 24 ರಂದು ಭೀಮಸಮುದ್ರದಿಂದ ದಾವಣಗೆರೆ ಜೆ.ಎಂ.ಐ.ಟಿ. ಗೆಸ್ಟ್ ಹೌಸ್‍ಗೆ ಬಂದು ಪ್ರತ್ಯೇಕ ಕೊಠಡಿಯಲ್ಲಿ ತಂಗಿರುತ್ತಾರೆ.

ಈ ಮಾಹಿತಿಯು ಗೆಸ್ಟ್ ಹೌಸನಲ್ಲಿ ವಾಸವಿದ್ದ ಸಿಬ್ಬಂದಿಯಿಂದ ತಿಳಿದು ಬಂದಿದ್ದು, ಅದೇ ದಿನ ಜಿಲ್ಲಾ ಆರ್.ಆರ್.ಟಿ. ತಂಡ ಮತ್ತು ಸ್ಥಳಿಯ ಆರ್ಯೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು ತಕ್ಷಣ ಆ ವ್ಯಕ್ತಿಯನ್ನು ಭೇಟಿ ಮಾಡಿ ತಪಾಸಣೆ ನಡೆಸಿದಾಗ, ಆ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದೇ ಇದ್ದುದ್ದರಿಂದ ಅವರನ್ನು ಉಳಿದ 7 ದಿನಗಳ ಕಾಲ ಗೆಸ್ಟ್ ಹೌಸನಲ್ಲಿ ಪ್ರತ್ಯೇಕಿಸಿ ಅವಲೋಕನದಲ್ಲಿ ಇಡಲಾಗಿದೆ.

ಈ ವ್ಕಕ್ತಿಯು ಚಿತ್ರದುರ್ಗದ ಭೀಮಸಮುದ್ರದ ಅವರ ಮನೆಯಲ್ಲಿ ಇದ್ದ ಪಿ-32 ಪ್ರಕರಣದ ನೇರ ಸಂಪರ್ಕದಲ್ಲಿ ಇದ್ದ ಕಾರಣ ನಿಯಮಾನುಸಾರ ಮಾ. 26 ರಂದು ಗಂಟಲುದ್ರವವನ್ನು ತೆಗೆದು ಶಿವಮೊಗ್ಗದ ವಿ.ಆರ್.ಡಿ.ಎಲ್ ಪ್ರಯೋಗ ಶಾಲೆಗೆ ಕಳುಹಿಸಲಾಗಿದ್ದು, ಮಾ. 28 ರಂದು ಸಂಜೆ 7.00 ಗಂಟೆ ವ್ಯಕ್ತಿಯು ಗಂಟಲು ದ್ರವದ ಮಾದರಿಯನ್ನು ಪ್ರಾಥಮಿಕ ಫಲಿತಾಂಶ ಪಾಸಿಟಿವ್ ಎಂದು ಬಂದಿದ್ದು, ತಕ್ಷಣವೇ ದಾವಣಗೆರೆಯ ಎಸ್.ಎಸ್.ಐ.ಎಂ.ಎಸ್ ಆಸ್ವತ್ರೆಗೆ ದಾಖಲಿಸಿದ್ದಾರೆ.

ಮಾ.28 ರಂದು ರಾಜ್ಯ ಸರ್ವೇಕ್ಷಣಾ ಘಟಕದ ನಿರ್ದೇಶನದಂತೆ ಕೋವಿಡ್-19 ಖಚಿತಪಟ್ಟ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ವೇಕ್ಷಣಾ ಘಟಕದ ಮಾರ್ಗಸೂಚಿಯಂತೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿದ್ದು, ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಮತ್ತು ಈ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 8 ಮಂದಿಯಯನ್ನು ಗುರುತಿಸಿದ್ದು ಅವರ ರೋಗ ಲಕ್ಷಣಗಳ ತಪಾಸಣೆ ನಡೆಸಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ವ್ಯಕ್ತಿಯ ಪ್ರಯಾಣದ ವಿವರ ಈ ಕೆಳಕಂಡತಿದೆ

ದಾವಣಗೆರೆ ನಗರದ ಈ ವ್ಯಕ್ತಿಯೊಬ್ಬರು ಅಮೇರಿಕಾದ ಚಿಕಾಗೋ ನಗರದ ಹತ್ತಿರದ ಪ್ರಡ್ಯೂ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಮಾ. 15 ರಂದು ಹಾಸ್ಟಲ್‍ನಿಂದ ಉಬರ್ ಕ್ಯಾಬನಲ್ಲಿ ಹೊರಟು ಚಿಕಾಗೋ ತಲುಪಿದ್ದಾರೆ. ಅಲ್ಲಿಂದ ಏರ್ ಇಂಡಿಯಾ ಎ.ಐ-126 ವಿಮಾನದಲ್ಲಿ ಸೀಟ್ ಸಂಖ್ಯೆ-12 ಹೆಚ್ ರಲ್ಲಿ ಪ್ರಯಾಣಿಸಿ ಮಾ 17 ರಂದು ಬೆಳಗಿನ ಜಾವ 12.30 ಕ್ಕೆ ನವದೆಹಲಿ ತಲುಪಿರುತ್ತಾರೆ. (ಈ ವಿಮಾನವು 4 ಗಂಟೆ ತಡವಾಗಿ ಆಗಮಿಸಿರುತ್ತದೆ)

ನವದೆಹಲಿಯಿಂದ ಏರ್‍ಇಂಡಿಯಾ ವಿಮಾನ ಎ.ಐ.-504 ಸಿಟ್‍ಸಂಖ್ಯೆ ಡಿ 17 ರಲ್ಲಿ ಪ್ರಯಾಣಿಸಿ ಬೆಂಗಳೂರಿಗೆ 3.00 ಗಂಟೆಗೆ ತಲುಪಿರುತ್ತಾರೆ, ಬೆಂಗಳೂರು ವಿಮಾನ ನಿಲ್ದಾಣದಿಂದ 4.00 ಗಂಟೆಗೆ ಸ್ವಂತ ಕಾರಿನಲ್ಲಿ ಹೊರಟು ಅದೇ ದಿನ ಬೆಳಿಗ್ಗೆ 10.00 ಗಂಟೆಗೆ ಚಿತ್ರದುರ್ಗದ ಭೀಮಸಮುದ್ರ ಗ್ರಾಮಕ್ಕೆ ತಲುಪಿರುತ್ತಾರೆ. ಅಲ್ಲಿ ತಮ್ಮ ಸ್ವಂತ ಮನೆಯಲ್ಲಿ ಪ್ರತ್ಯೆಕವಾಗಿ ತಂಗಿದ್ದು ಮತ್ತು ಚಿತ್ರದುರ್ಗ ಸರ್ವೇಕ್ಷಣಾ ತಂಡದ ಅವಲೋಕನದಲ್ಲಿ ಇರುತ್ತಾರೆ. ಸದರಿ ವ್ಯಕ್ತಿಯು ಚಿತ್ರದುರ್ಗ ಜಿಲ್ಲೆಯಿಂದ ಹೊರಟು ದಾವಣಗೆರೆ ಜಿಲ್ಲೆಗೆ ಬಂದಿರುವ ಮಾಹಿತಿಯು ಲಭ್ಯವಾದ ತಕ್ಷಣವೇ ಕೋವಿಡ್-19 ರ ಮಾರ್ಗಸೂಚಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಳ್ಳಲಾದ ಮುಂಜಾಗ್ರತಾ ಕ್ರಮಗಳು ಇಂತಿವೆ

  • ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ದಿನಾಂಕ: 14.04.2020 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
  • ಜಿಲ್ಲಾಡಳಿತದಿಂದ ಲಾಕ್‍ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
  • ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
  • ಸೋಂಕು ದೃಡಪಟ್ಟ ವ್ಯಕ್ತಿಯನ್ನು ಎಸ್.ಎಸ್.ಐ.ಎಂ.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದೆ. ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 5 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾರಿಗೂ ಯಾವುದೇ ಲಕ್ಷಣ ಇರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಮನೆಯಲ್ಲೆ 14 ದಿನಗಳ ಕಾಲ ಅವಲೋಕನದಲ್ಲಿ ಇಡಲಾಗುವುದು. ಕಾಲ ಕಾಲಕ್ಕೆ ರಾಜ್ಯ ಸರ್ಕಾರದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending