ದಿನದ ಸುದ್ದಿ
ದಾವಣಗೆರೆ | ಲಸಿಕಾ ಕಾರ್ಯಕ್ರಮಕ್ಕೆ WHO ಮೆಚ್ಚುಗೆ
ಸುದ್ದಿದಿನ, ದಾವಣಗೆರೆ : ಕಳೆದ ಆಗಸ್ಟ್ ಮಾಹೆಯಲ್ಲಿ ಆರೋಗ್ಯಹ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ನೀಡುವ ವಿವಿಧ ಲಸಿಕಾ ಅಭಿಯಾನವನ್ನು ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ನಿಯಮಾವಳಿಗಳನ್ನು ಪಾಲಿಸಿ ಅಳುಕಿಲ್ಲದೇ ಮೊದಲು ಪ್ರಾರಂಭಿಸಿದ ದಾವಣಗೆರೆ ಜಿಲ್ಲೆಯ ಕ್ರಮಕ್ಕೆ ಡಬ್ಲ್ಯುಹೆಚ್‍ಓ ಮೆಚ್ಚುಗೆ ವ್ಯಕ್ತಪಡಿಸಿದೆ. ಹಾಗೂ ವಿವಿಧ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ರಾಜ್ಯಕ್ಕೆ ಬೆಳ್ಳಿ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಡಿಹೆಚ್‍ಓ ಡಾ.ನಾಗರಾಜ್, ಡಿಎಸ್ ಡಾ.ಜೈಪ್ರಕಾಶ್, ಡಿಎಸ್‍ಓ ಡಾ.ರಾಘವನ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಡಾ.ರವಿ ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243