ದಿನದ ಸುದ್ದಿ
ದಾವಣಗೆರೆ | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಅಹ್ವಾನ
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಪ್ರಕ್ರಿಯೆಯು ಮೇ.19 ರಿಂದ ಪ್ರಾರಂಭವಾಗಿದ್ದುವಿದ್ಯಾರ್ಥಿಗಳು dtetech.karnataka.gov.in/kartechnical ಗಳಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ಸಂಸ್ಥೆಯಲ್ಲಿ ಅರ್ಜಿಯನ್ನು ಪಡೆದು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಮೇ.26 ಸಂಜೆ 5 ಗಂಟೆಯೊಳಗೆ ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಕುಮಾರಸ್ವಾಮಿ ಎನ್.ಎಂ 8277092033 ಹಾಗೂ ವಿಜಯಕುಮಾರ 9945595528 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾಚಾರ್ಯರು ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243