ದಿನದ ಸುದ್ದಿ

ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 17 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 63 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಏಪ್ರಿಲ್ 8 ರಿಂದ ಈ ವೆಬ್‍ಸೈಟ್ ಗೆ http://davanagere.nic.in ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ | ದಾವಣಗೆರೆ | ಏ.08 ರಂದು ಜನಸ್ಪಂದನ ಸಭೆ

ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ದಾವಣಗೆರೆ ದೂ.ಸಂ: 08192-263219, ಹರಿಹರ ದೂ.ಸಂ:08192-241431, ಜಗಳೂರು ದೂ.ಸಂ: 08196-227132, ಹೊನ್ನಾಳಿ ದೂ.ಸಂ: 08188-251283 ಚನ್ನಗಿರಿ ದೂ.ಸಂ: 08189-228010 ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version