ದಿನದ ಸುದ್ದಿ

ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version