ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ. ರಿಷ್ಯಂತ್ ಅಧಿಕಾರ ಸ್ವೀಕಾರ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿದರು.
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣಕ್ಕಾಗಿ ಲಾಕ್‍ಡೌನ್ ಅನ್ನು ಮುಂದುವರೆಸಿ ಸರ್ಕಾರ ಆದೇಶ ಹೊರಡಿಸಿದೆ.
ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ನಿಯಂತ್ರಿಸಲು ಲಾಕ್‍ಡೌನ್ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆದ್ಯತೆ ನೀಡಲಾಗುವುದು. ನಗರದಲ್ಲಿ ಎಲ್ಲೆಲ್ಲಿ ಯಾವ ಯಾವ ಸಮಸ್ಯೆಗಳಿವೆ ಎಂಬುದರ ಬಗ್ಗೆ ಮಾಹಿತಿ ಮತ್ತು ದಾಖಲೆಗಳನ್ನು ಪಡೆದುಕೊಂಡು ನಂತರ ಅದಕ್ಕೆ ತಕ್ಕ ಕ್ರಮಗಳನ್ನು ಜರುಗಿಸುವಂತಹ ಕೆಲಸ ಮಾಡಲಾಗುವುದು.
ದಾವಣಗೆರೆ ನಗರದಲ್ಲಿ ಅನುಮತಿಸಲಾದ ಸಮಯವನ್ನು ಮೀರಿ, ಸಾರ್ವಜನಿಕರು, ವ್ಯಾಪಾರಿಗಳು ಲಾಕ್‍ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಕಠಿಣ ಕ್ರಮ ಜರುಗಿಸುವಂತೆ ಈಗಾಗಲೆ ಸಂಬಂಧಪಟ್ಟ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಿರುವ ಕಾರಣಕ್ಕಾಗಿ ಗ್ರಾಮ ಗ್ರಾಮಗಳಿಗೆ ತೆರಳಿ, ಲಾಕ್‍ಡೌನ್ ಅನುಷ್ಠಾನ ಪರಿಶೀಲಿಸಲಾಗುವುದು.
ಕಂದಾಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಪಡೆದು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲಾಗುವುದು. ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಒಂದು ತಂಡದ ರೀತಿ ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ, ಅಪರಾಧ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಶ್ರಮಿಸಲಾಗುವುದು.
ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಹಾಯವಾಣಿಗೆ ಕರೆ ಮಾಡಿ, ನೆರವು ಪಡೆಯಬಹುದಾಗಿದೆ. ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಗೂ ಸಮರ್ಪಕವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಸಾಮಾನ್ಯ ಜನರ ದೂರಿಗೆ ಸ್ಪಂದಿಸದ ಪೊಲೀಸ್ ಇಲಾಖೆಯ ಯಾವುದೇ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ.
ಇದನ್ನೂ ಓದಿ | ಕವಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ
ಅಕ್ರಮ ಮರಳು ದಂಧೆ, ಅಕ್ರಮ ಮದ್ಯ ಮಾರಾಟ ಮುಂತಾದ ಅಕ್ರಮ ಚಟುವಟಿಕೆಗಳಲ್ಲಿ ಒಂದು ವೇಳೆ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭಾಗಿಯಾಗಿದ್ದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಗೊಂಡು ಲಾಕ್‍ಡೌನ್ ಸಡಿಲಗೊಂಡ ಬಳಿಕ, ಕಾನೂನು ಸುವ್ಯವಸ್ಥೆ ಪಾಲನೆ ಮಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಮೊದಲ ಆದ್ಯತೆ ನೀಡಲಾಗುವುದು. ಅಲ್ಲದೆ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚುವ ಪ್ರಮಾಣ ಹೆಚ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ರಚಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ7 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ4 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ3 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ11 hours agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

