ದಿನದ ಸುದ್ದಿ
10 ವರ್ಷದಲ್ಲಿ ಸುಮಾರು 349 ಜಾತಿ ನಿಂದನೆ ಕೇಸ್ ದಾಖಲು : ಎ ಎಸ್ಪಿ ರಾಜೀವ್
ಸುದ್ದಿದಿನ,ದಾವಣಗೆರೆ: ನಿಮ್ಮ ಕುಂದು ಕೊರತೆಗಳು ನಮಗೆ ಅರ್ಥವಾಗಿದೆ. ನಮ್ಮ ಇಲಾಖೆಯು 10 ವರ್ಷದಲ್ಲಿ ಸುಮಾರು 349 ಜಾತಿ ನಿಂದನೆ ಕೇಸ್‍ಗಳನ್ನು ದಾಖಲಿಸಿಕೊಂಡಿದ್ದು, ಇಲ್ಲಿ 7 ಜನರಿಗೆ ಮಾತ್ರ ಪರಿಹಾರ ಬರಬೇಕು. ಜೊತೆಗೆ 99 ಕೇಸ್‍ಗಳು ಬಾಕಿ ಇದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ರಾಜೀವ್ ಮಾಹಿತಿ ನೀಡಿದರು.
ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಅವರು ಮಾಹಿತಿ ಹಂಚಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243