ದಿನದ ಸುದ್ದಿ

ದಾವಣಗೆರೆ | ಮುಂದಿನ 2 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಂಭವ

Published

on

ಸುದ್ದಿದಿನ, ದಾವಣಗೆರೆ : ಮುಂದಿನ 2 ಗಂಟೆಗಳಲ್ಲಿ ದಾವಣಗೆರೆ ( Davangere) ಜಿಲ್ಲೆಯಾದ್ಯಂತ ಭಾರೀ ಮಳೆ (Havy Rain ) ಬೀಳುವ ಸಂಭವವಿರುವುದಾಗಿ ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ತಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿರುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ( P.N. Lokesh) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ತಮ್ಮ ಪ್ರೀತಿಗೆ ನಾನು ಚಿರ‌ಋಣಿ : ಸಿದ್ದರಾಮಯ್ಯ

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಅಧೀನ ಸಿಬ್ಬಂದಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ರಕ್ಷಣಾ ಸಿಬ್ಬಂದಿ ಹಾಗೂ ಸಾಮಗ್ರಿಗಳೊಂದಿಗೆ ಸನ್ನದ್ಧರಾಗಿರಲು ತಿಳಿಸಿದೆ. ಯಾವುದೇ ಅವಘಡ ಸಂಭವಿಸಿದಲ್ಲಿ, ಕೂಡಲೇ ಈ ಕಾರ್ಯಾಲಯಕ್ಕೆ ವರದಿ ಮಾಡಲು ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ| ವಾಟ್ಸಾಪ್| 9980346243

Trending

Exit mobile version