Connect with us

ದಿನದ ಸುದ್ದಿ

ದಾವಣಗೆರೆ | ಹೆರಿಗೆಯಾದ ಎರಡು ಗಂಟೆಯಲ್ಲಿ ಮಗು ನಾಪತ್ತೆ : ಅಪಹರಿಸಿದ ಮಹಿಳೆ ವಿಡಿಯೋ ಲಭ್ಯ

Published

on

ವಿಡಿಯೋದಲ್ಲಿ ಸೆರೆಯಾದ ಮಹಿಳೆಯ ಚಿತ್ರ

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಎರಡು ಗಂಟೆಯಲ್ಲಿ ನಾಪತ್ತೆಯಾಗಿರುವ ಮಗು ಹದಿನಾಲ್ಕು ದಿನವಾದರೂ ಪತ್ತೆ ಆಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರು ಆಸ್ಪತ್ರೆಯ ಮುಂದೆ ಧರಣಿಕೂತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗುವನ್ನು ಅಪಹರಿಸಿದ ಮಹಿಳೆಯ ವಿಡಿಯೋ ಸಧ್ಯ ಲಭ್ಯವಾಗಿದೆ. ತಲೆಗೆ ಬಿಳಿ ಸ್ಕಾರ್ಫ್, ಗುಲಾಬಿ ಬಣ್ಣದ ಚೂಡಿ ಹಾಕಿದ ಮಹಿಳೆಯು ಮಗುವನ್ನು ಅಪಹರಣಮಾಡಿದ್ದಾಳೆ.

ಉಮಾಸಲ್ಮಾ(22) ಹದಿನಾಲ್ಕು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಸಂಬಂಧಿಕರ ಕೈಗೆ ಮಗು ಕೊಡುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿತ್ತು. ನಂತರ ಮಗು ನಾಪತ್ತೆಯಾಗಿದ್ದಾಗಿ ತಿಳಿಸಿದ್ದಾರೆ.

ಈ ಪ್ರಕರಣವು ಈಗ ಮತ್ತೊಂದು ತಿರುವು ಪಡೆದಿದ್ದು, ಮಗು ಮಾರಾಟ ಜಾಲದ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಉಮಾಸಲ್ಮಾ- ಇಸ್ಮಾಯಿಲ್ ಜಬೀವುಲ್ಲಾ ದಂಪತಿಗಳ ಮಗುವು ನಾಪತ್ತೆ ಆಗಿದೆ. ಇದೇ ತಿಂಗಳ 16ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೆರಿಗೆ ಬಳಿಕ ಮಗುವಿಗೆ ಬಟ್ಟೆ ತರಲು ಸಿಬ್ಬಂದಿ ಹೇಳಿದ್ದರು. ತಂದೆಯು ಬಟ್ಟೆ ತರುವಷ್ಟರಲ್ಲಿ ಮಗು ನಾಪತ್ತೆಯಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಮಗು ಸಿಗುವ ತನಕ ಹೋರಾಟ ನಡೆಸುತ್ತೇವೆ ಎಂದು ಪಾಲಕರು ಆಕ್ರೋಶ ಹೊರಹಾಕಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending