ದಿನದ ಸುದ್ದಿ

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ.

ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಮುಪ್ಪಣ್ಣ ಎಂಬುವವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆರೋಪ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ 50% ರಷ್ಟು ಶಿಕ್ಷಕರನ್ನು ಪರಿಶಿಷ್ಟ ಸಮುದಾಯದವರನ್ನೆ ನೇಮಕಾತಿ ಮಾಡಿಕೊಳ್ಳದೆ ಇರುವ ಆರೋಪದಲ್ಲಿ ಅಡಿಯಲ್ಲಿ ಆಯುಕ್ತರು ಹಾಗೂ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಎಲ್.ಆರ್.ಚಂದ್ರಪ್ಪ ದೂರು ನೀಡಿದ್ದರು.

ನಿರ್ದೇಶಕರು, ಸಾರ್ವಜನಿಕ ಶಿಕ್ಣ ಇಲಾಖೆ, ಬೆಂಗಳೂರು ಇವರು ‘ಶಾಲಾ ನೋಂದಣಿಯನ್ನು ರದ್ದುಪಡಿಸಿ, ವೇತನಾನುದಾನವನ್ನು ಹಿಂಪಡೆಯುವಂತೆ’ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿರುತ್ತಾರೆ.

ಆದರೆ ಉಪ ನಿರ್ದೇಶಕರಾದ ಜಿ.ಕೊಟ್ರೇಶ್ ಇವರು ಹಣ ಹಾಗೂ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಮೇಲಾಧಿಕಾರಿಗಳ ಆದೇಶವನ್ನು ಪಾಲಿಸದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಉಪ ನಿರ್ದೇಶಕ ಜಿ.ಕೊಟ್ರೇಶ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಎಲ್.ಆರ್.ಚಂದ್ರಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version