ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243