ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಮಾರೋಪ ಭಾಷಣವನ್ನು ಧಾರಾಶಿವ್ (ಮಹಾರಾಷ್ಟ್ರ) ಜಿಲ್ಲಾಧಿಕಾರಿಗಳಾದ ಶ್ರೀ ಕೀರ್ತಿ ಕಿರಣ್ ಹೆಚ್. ಪೂಜಾರ್, ಐಎಎಸ್ ಅವರು ನೆರವೇರಿಸಿದರು. ತಮ್ಮ ಭಾಷಣದಲ್ಲಿ ವಿದ್ಯಾರ್ಥಿನಿಯರು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವುದು ಅವರ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು.

ಶಿಸ್ತು, ಸಮಯಪಾಲನೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ಬಿ. ಅವರು ಕಾಲೇಜಿನ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿ, ವಿದ್ಯಾರ್ಥಿನಿಯರ ಪರಿಶ್ರಮವನ್ನು ಮೆಚ್ಚಿದರು. ಸಂಸದರ ಮತ್ತು ಶಾಸಕರು, ಸಿ ಡಿ ಸಿ ಸದಸ್ಯರು ಸಹಕಾರವನ್ನು ಸ್ಮರಸಿದರು.

ಉಪಸ್ಥಿತರಾಗಿ ಡಾ. ನಾಗನಗೌಡ ಎಸ್.ಪಿ., ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಅರ್ಥಶಾಸ್ತ್ರ ವಿಭಾಗ; ಡಾ. ಭೀಮಪ್ಪ ಎಂ.ಪಿ., ಸಂಚಾಲಕರು, ಐಕ್ಯುಎಸಿ; ಶ್ರೀಮತಿ ಸವಿತಾ ಎಸ್., ಕಚೇರಿ ಅಧೀಕ್ಷಕರು ಸೇರಿದಂತೆ ಹಲವಾರು ವೇದಿಕೆ ಮೇಲೆ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಪ್ರಸ್ತಾವಿಕ ನುಡಿ ಹಾಗೂ ವಾರ್ಷಿಕ ವರದಿಯನ್ನು ಡಾ. ಶೋಭಾ ಸಾವಕಾರ, ಸಂಚಾಲಕರು, ಸಾಂಸ್ಕೃತಿಕ ಸಮಿತಿ ವಾಚಿಸಿದರು. ಸ್ವಾಗತವನ್ನು ಡಾ. ಭೀಮಪ್ಪ ಎಂ.ಪಿ. ನೆರವೇರಿಸಿದರು. ನಿರೂಪಣೆಯನ್ನು ಸುಭಾಸ್ ನಿರ್ವಹಿಸಿದರು. ವಿದ್ಯಾರ್ಥಿನಿ ಕವನ ಪ್ರಾರ್ಥನಾ ಗೀತೆಯನ್ನು ಹಾಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ.ಎಸ್. ಈಶ್ವರಪ್ಪ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ನಾಯಕತ್ವ ಹಾಗೂ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಸಿ.ಡಿ.ಸಿ. ಸದಸ್ಯರಾದ ಅನಿಲ್ ಗೌಡ್ರು ಮತ್ತು ಶ್ರೀಮತಿ ಸುಜಾತಾ ಉಪಸ್ಥಿತರಿದ್ದರು.

ಉಪನ್ಯಾಸಕರಾದ ತೊಪ್ಪಲು ಮಲ್ಲಿಕಾರ್ಜುನರವರು ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಡಾ. ಕುಮಾರ್ ವಿದ್ಯಾರ್ಥಿನಿಯರ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕ್ರೀಡಾ ವಿಭಾಗದ ಸನ್ಮಾನವನ್ನು ದೈಹಿಕ ನಿರ್ದೇಶಕಿ ಸುನೀತಾ, ಸಾಂಸ್ಕೃತಿಕ ವಿಭಾಗದ ಸನ್ಮಾನವನ್ನು ಹಾಗೂ ವಂದನಾರ್ಪಣೆಯನ್ನು ಸುರೇಖಾ ನೆರವೇರಿಸಿದರು.

ಸಮಾರಂಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243,

Trending

Exit mobile version