ದಿನದ ಸುದ್ದಿ
ಜಾಲಿನಗರ ಕಂಟೈನ್‍ಮೆಂಟ್ ಝೋನ್ ನಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳು : ಜಿಲ್ಲಾಧಿಕಾರಿ
ಸುದ್ದಿದಿನ, ದಾವಣಗೆರೆ: ಜಾಲಿನಗರ ಕಂಟೈನ್‍ಮೆಂಟ್ ಝೋನ್‍ನಲ್ಲೇ ಅತಿ ಹೆಚ್ಚು ಪ್ರಕರಣಗಳಿದ್ದು, ರೋಗಿ ಸ್ಥಿತಿ ಉಲ್ಬಣವಾಗುವವರೆಗೆ ರೋಗದ ಮಾಹಿತಿಯನ್ನು ನೀಡದೇ ಇರಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು,ಚಿಕ್ಕ ಮಕ್ಕಳ ಮತ್ತು 60 ವರ್ಷ ಮೇಲ್ಪಟ್ಟವರ ರೋಗದ ಬಗ್ಗೆ ಮಾಹಿತಿ ನೀಡಬೇಕು. ರೋಗ ಲಕ್ಷಣ ಕಂಡು ಬಂದ ತಕ್ಷಣ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯ ಸರ್ವೇಕ್ಷಣಾ ಕಾರ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ನೀಡಿ ಸಹಕರಿಸಿದಲ್ಲಿ ರೋಗ ನಿಯಂತ್ರಣ ಸಾಧ್ಯವಾಗುತ್ತದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243