Connect with us

ದಿನದ ಸುದ್ದಿ

ದಾವಣಗೆರೆ | ಮಾಸ್ಕ್ ಹಾಗೂ ಸಾಮಾಜಿಕ ಅಂತರ ಉಲ್ಲಂಘನೆ : 51. 67 ಲಕ್ಷ ರೂ. ದಂಡ ಸಂಗ್ರಹ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈವರೆಗೆ 30218 ಜನರಿಂದ 51. 67 ಲಕ್ಷ ರೂ. ದಂಡ ಸಂಗ್ರಹಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು, ಕೋವಿಡ್-19 ವೈರಸ್ ಸೋಂಕು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಈ ದಿಸೆಯಲ್ಲಿ ಜನರಿಗೂ ತಮ್ಮ ಜವಾಬ್ದಾರಿಯನ್ನು ನಿಭಾಹಿಸುವ ಹೊಣೆ ನೀಡಲಾಗಿದೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿಯೇ ಮನೆಯಿಂದ ಹೊರಗೆ ಬರಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸರ್ಕಾರ ನಿಗದಿಪಡಿಸಿರುವ ಎಲ್ಲ ಸ್ಥಳಗಳಲ್ಲಿ ಜನರು ನಿಗದಿತ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಇದನ್ನು ಪಾಲಿಸುವುದು ಅನಿವಾರ್ಯ ಹಾಗೂ ಅಗತ್ಯವಾಗಿದೆ.

ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸಲು ಸರ್ಕಾರ ಸೂಚನೆ ನೀಡಿದ್ದು, ಇದರನ್ವಯ ಜಿಲ್ಲೆಯಲ್ಲಿ ಈವರೆಗೆ ಪೊಲೀಸ್ ಇಲಾಖೆಯು ನಿಯಮ ಉಲ್ಲಂಘಿಸಿದ 30218 ಜನರಿಂದ 51.67 ಲಕ್ಷ ರೂ. ದಂಡ ಸಂಗ್ರಹಿಸಿದೆ. ಕಳೆದ ಅ. 23 ರಿಂದ 29 ರವರೆಗೆ ಅಂದರೆ ಏಳು ದಿನಗಳ ಅವಧಿಯಲ್ಲಿಯೇ ನಿಯಮ ಉಲ್ಲಂಘಿಸಿದ 741 ಜನರಿಂದ 1. 10 ಲಕ್ಷ ರೂ. ದಂಡ ಸಂಗ್ರಹಿಸಿದೆ.

ದಸರಾ ಹಬ್ಬದ ಅವಧಿಯಲ್ಲಿ ಅಂದರೆ ಅ. 25 ಮತ್ತು 26 ರಂದು ಎರಡು ದಿನಗಳ ಅವಧಿಯಲ್ಲಿ ಒಟ್ಟು 181 ಜನರಿಂದ 29350 ರೂ. ದಂಡ ಸಂಗ್ರಹಿಸಲಾಗಿದೆ. ಸಾರ್ವಜನಿಕರು ಇನ್ನಾದರೂ ಇಂತಹ ದಂಡ ಪ್ರಕ್ರಿಯೆಗೆ ಅವಕಾಶ ನೀಡದೆ, ಕೋವಿಡ್ ಪಿಡುಗನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮಗಳನ್ನು ತಪ್ಪದೆ ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending