Connect with us

ದಿನದ ಸುದ್ದಿ

ದಾವಣಗೆರೆ | ಖಾಸಗಿ ನರ್ಸಿಂಗ್ ಕಾಲೇಜಿನ 25 ವಿದ್ಯಾರ್ಥಿನಿಯರಿಗೆ ಕೊರೋನಾ

Published

on

 

ಸುದ್ದಿದಿನ, ದಾವಣಗೆರೆ : ಮಂಗಳವಾರ ಬಂದಿರುವ ಪಾಸಿಟಿವ್ ವರದಿಗಳಲ್ಲಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಕೇರಳದ 25 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇವರೆಲ್ಲರೂ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿದ್ಯಾರ್ಥಿನಿಯರು ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ವಾಸವಿದ್ದು, ಅಲ್ಲಿನ 134 ವಿದ್ಯಾರ್ಥಿನಿಯರು, 15 ಜನ ಅಡುಗೆ ಸಿಬ್ಬಂದಿ ಮತ್ತು ಪರಿಚಾರಕರ ಗಂಟಲು ಮಾದರಿ ದ್ರವ ಪಡೆಯಲಾಗಿದೆ. ವಿದ್ಯಾರ್ಥಿನಿಲಯವನ್ನು ‘ಕಂಟೋನ್ಮೆಂಟ್ ಜೋನ್’ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದ್ದೇಶಿಸಿದ್ದು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಪ್ರತಿದಿನ 10 ದಿನಗಳ ಕಾಲ ‘ಫ್ಲೂ ಸರ್ವೆ’ ನಡೆಸಲಾಗುತ್ತದೆ.

ಕಾಲೇಜಿನ ವಿದ್ಯಾರ್ಥಿ/ನಿಯರು ಮತ್ತು ಸಿಬ್ಬಂದಿಗಳನ್ನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ವಿದ್ಯಾರ್ಥಿ/ನಿಯರನ್ನ ಕೊರೋನ ಟೆಸ್ಟ್ ಗೆ ಒಳಪಡಿಸಲಾಗಿದೆ, ಮಂಗಳವಾರ ಒಟ್ಟು 25 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೋನ ಪಾಸಿಟಿವ್ ಬಂದಿದೆ.

ಸೋಮವಾರ ಜಿಲ್ಲೆಯಲ್ಲಿ 9 ಜನರಲ್ಲಿ ಕೊರೋನ ಸೊಂಕು ಕಾಣಿಸಿಕೊಂಡಿದೆ. ಮಂಗಳವಾರ ದಾವಣಗೆರೆ ಜಿಲ್ಲೆಯಲ್ಲಿ 47 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. 7666 ಜನರ ಗಂಟಲು ಮಾದರಿ ಪರೀಕ್ಷೆಯ ವರದಿ ಬಾಕಿ ಇದ್ದು, ಇಂದು 1801 ಜನರ ವರದಿ ನೆಗೆಟಿವ್ ಬಂದಿದೆ.3 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ರೂಪಾಂತರಿ ವೈರಸ್ ಕಂಡು ಬಂದಿಲ್ಲ

ಮಂಗಳವಾರ ಬಂದಿರುವ ಕೊವಿಡ್ ಪಾಸಿಟಿವ್ ಎಲ್ಲರೂ ಕೇರಳದವರು. 2 ತಿಂಗಳ ಹಿಂದೆ ಕಾಲೇಜು ಪ್ರಾರಂಭವಾದಾಗ ಬಂದಿರುತ್ತಾರೆ. ಅಲ್ಲಿಂದ ಬರುವಾಗ ‘ಕೋವಿಡ್ ನೆಗೆಟಿವ್ ರಿಪೋರ್ಟ್’ ತೆಗೆದುಕೊಂಡು ಬಂದಿದ್ದಾರೆ ಎಂದು ಹಾಸ್ಟೆಲ್ ಮೇಲ್ವಿಚಾರಕರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸರ್ವೇಕ್ಷಣಾ ವಿಭಾಗದಿಂದ ಸಮಗ್ರ ಮಾಹಿತಿ ಪಡೆಯುತ್ತಿದ್ದೇವೆ. ಸೋಂಕು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ವೇಕ್ಷಣೆ ಇಲಾಖೆಯ ಡಾ.ರಾಘವನ್ ತಿಳಿಸಿದ್ದಾರೆ.


ತಾಲ್ಲೂಕುವಾರು ಕೊವಿಡ್ ಮಾಹಿತಿ

ದಾವಣಗೆರೆ : 39
ಹೊನ್ನಾಳಿ : 4
ಹರಿಹರ-ಚನ್ನಗಿರಿ ತಲಾ :1 ಪಾಸಿಟಿವ್ ಪ್ರಕರಣ

ಈವರೆಗೆ ಒಟ್ಟು ಪಾಸಿಟಿವ್‌ ಪ್ರಕರಣಗಳು: 22,751
ಒಟ್ಟು ಸಕ್ರಿಯ ಪ್ರಕರಣಗಳು : 170
ಮಂಗಳವಾರ ಸೋಂಕಿನಿಂದ ಮೃತಪಟ್ಟವರು: 00
ಈವರೆಗೆ ಸೋಂಕಿನಿಂದ ಮೃತಪಟ್ಟವರು ಒಟ್ಟು: 264
ಮಂಗಳವಾರ ಕೋವಿಡ್ ಗುಣಮುಖರು :03
ಈವರೆಗೆ ಕೋವಿಡ್‌ ಗುಣಮುಖರಾದವರು ಒಟ್ಟು : 22,31


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending