Connect with us

ದಿನದ ಸುದ್ದಿ

ದಾವಣಗೆರೆ ಕೊರೊನಾ ಪಾಸಿಟಿವ್ : ಕ್ವಾರೆಂಟೈನ್ ಮಾಡಲು ನಗರದ ಹೋಟೆಲ್‍ಗಳಲ್ಲಿ 740 ರೂಂ ರಿಸರ್ವ್ಡ್..!

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಘೋಷಿತ ಸ್ಲಂಗಳಲ್ಲಿ ಒಂದಾದ ಭಾಷಾನಗರದ 35 ವರ್ಷದ ಮಹಿಳೆಯೋರ್ವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು ಇವರು ರೋಗಿ ಸಂಖ್ಯೆ 533 ಆಗಿದ್ದಾರೆ. ಈ ಮಹಿಳೆ ಈ ಭಾಗದ ನಗರ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.

ಹಾಗೂ ಈ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನರನ್ನು ಹೋಟೆಲ್ ಒಂದರಲ್ಲಿ ಐಸೋಲೇಷನ್‍ನಲ್ಲಿ ಇಡಲಾಗಿದೆ. ಇವರ ಸಂಪರ್ಕದಲ್ಲಿದ್ದ 35 ಜನರ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರು ಕೆಲಸ ಮಾಡುತ್ತಿದ್ದ ನಗರ ಆರೋಗ್ಯ ಕೇಂದ್ರವನ್ನು ಬಂದ್ ಮಾಡಲಾಗಿದೆ.

ಕಂಟೈನ್‍ಮೆಂಟ್ ಮತ್ತು ಬಫರ್ ಝೋನ್ ಗುರುತಿಸುವಿಕೆ

ಈ ಮಹಿಳೆ ವಾಸಿಸುತ್ತಿದ್ದ ಮನೆಯನ್ನು ಎಪಿಸೆಂಟರ್ ಎಂದು ಗುರುತಿಸಿ ಈ ಎಪಿಸೆಂಟರ್‍ನ 100 ಮೀಟರ್ ವ್ಯಾಪ್ತಿ ಪ್ರದೇಶವನ್ನು ಕಂಟೈನ್‍ಮೆಂಟ್ ಝೋನ್ ಎಂದು ಗುರುತಿಸಿ, ಈ ಪ್ರದೇಶವನ್ನು ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಸಂಪೂರ್ಣ ಸೀಲ್‍ಡೌನ್ ಮಾಡಲಾಗುವುದು. ಜೊತೆಗೆ ಇಲ್ಲಿ ನಾಳೆಯಿಂದಲೇ ಸಕ್ರಿಯ ಸರ್ವೆಲೆನ್ಸ್ ನಡೆಸಲಾಗುವುದು. ಹಾಗೂ ಎಪಿಸೆಂಟರ್‍ನಿಂದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಿದ್ದು, ಇಲ್ಲಿಯೂ ಸಹ ಸರ್ವೆಲೆನ್ಸ್ ನಡೆಯಲಿದೆ. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್‍ಗಳಲ್ಲಿ 740 ರೂಂಗಳನ್ನು ಕಾಯ್ದಿರಿಸಲಾಗಿದೆ.

ಈ ಮಹಿಳೆಯ ಸೆಕೆಂಡರಿ ಕಾಂಟಾಕ್ಟ್‍ಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಈ ಮಹಿಳೆ ಏ.23 ರಂದು ಮಹಿಳೆಯೋರ್ವರಿಗೆ ಹೆರಿಗೆ ಮಾಡಿಸಿದ್ದು, ನಂತರ ತಮಗೆ ಸುಸ್ತು ಮತ್ತು ಸ್ವಲ್ಪ ಜ್ವರ ಕಾಣಿಸಿಕೊಂಡಿದೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ತಿಳಿಸಿದ್ದಾರೆ. ಆದ ಕಾರಣ ಆ ಮಹಿಳೆಯನ್ನೂ ಪತ್ತೆ ಹಚ್ಚಿ ಅವರನ್ನೂ ಪರೀಕ್ಷೆಗೆ ಒಳಪಡಿಸಿ ಕ್ರಮ ಕೈಗೊಳ್ಳಲಾಗುವುದು. ಹಾಗೂ ಸೋಂಕಿತ ಮಹಿಳೆಯ ಅಕ್ಕನ ಮನೆ ನಿಟುವಳ್ಳಿಯಲ್ಲಿ ಇದ್ದು ಸೋಂಕಿತಳ ಮಗ ಅಲ್ಲಿಗೆ ಹೋಗಿ ಬಂದಿದ್ದಾನೆ ಎನ್ನಲಾಗಿದ್ದು ಅಲ್ಲಿರುವ ಅವರ ಸಂಬಂಧಿಕರನ್ನೂ ಪರೀಕ್ಷಿಸಿ ಕ್ರಮ ವಹಿಸಲಾಗುವುದು ಎಂದರು.

ಇನ್ಸಿಡೆಂಟ್ ಕಮಾಂಡರ್ ನೇಮಕ

ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‍ರನ್ನು ಈ ಕಂಟೈನ್‍ಮೆಂಟ್ ಝೋನ್ ನಿರ್ವಹಣೆಗಾಗಿ ಇನ್ಸಿಡೆಂಟ್ ಕಮಾಂಡರ್ ಎಂದು ನೇಮಕ ಮಾಡಲಾಗಿದ್ದು ನಿಯಮಾನುಸಾರ ಇವರು ಇಲ್ಲಿ ಕ್ರಮ ಕೈಗೊಳ್ಳುವರು. ಕಂಟೈನ್‍ಮೆಂಟ್ ಝೋನ್‍ನಲ್ಲಿನ ಪ್ರತಿ ಮನೆ ಸರ್ವೇ ಮಾಡಲಾಗುವುದು. ಹಾಗೂ ಏರಿಯಾ ಡಿಸ್‍ಇನ್‍ಫೆಕ್ಷನ್ ಕೆಲಸ ಮಾಡಲಾಗುವುದು. ಹಾಗೆಯೇ ಈ ಪ್ರದೇಶಗಳಿಗೆ ಅಗತ್ಯ ವಸ್ತುಗಳು, ವೈದ್ಯಕೀಯ ಸೇವೆ ಹೊರತುಪಡಿಸಿ ಯಾವುದೇ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳು ಸೇರಿದಂತೆ ಕಲ್ಪನಹಳ್ಳಿ, ಪುಟಗನಾಳ್, ಬೇತೂರು, ಬೂದಾಳ್, ದೇವಿಕೆರೆ ಹೀಗೆ ನಗರ ವ್ಯಾಪ್ತಿಗೊಳಪಡುವ ಕೆಲವು ಗ್ರಾಮಗಳಿಗೂ ನಿನ್ನೆ ಘೋಷಿಸಿದ್ದ ಸಡಿಲಿಕೆಯನ್ನು ನಿರ್ಬಂಧಿಸಿ ಅಗತ್ಯ ವಸ್ತುಗಳ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್‍ಗಳಲ್ಲಿ 740 ರೂಂಗಳನ್ನು ಮೀಸಲಿಡಲಾಗಿದೆ.

ಮನವಿ

ಈ ಸೋಂಕಿತ ಮಹಿಳೆಯಿಂದ ಕಳೆದ 15 ದಿನಗಳಿಂದ ಚಿಕಿತ್ಸೆ, ಶುಶ್ರೂಷೆ ಪಡೆದವರು ಅಥವಾ ಸಂಪರ್ಕಕ್ಕೆ ಬಂದವರು ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡುತ್ತೇನೆ.

ಕೃಷಿ ಚಟುವಟಿಕೆಗಾಗಿ ವಿವಿಧ ತಾಲ್ಲೂಕು ಮತ್ತು ಹಳ್ಳಿಗಳಿಂದ ದಾವಣಗೆರೆಗೆ ರೈತರು ಬರುವುದನ್ನು ನಿಲ್ಲಿಸಿದರೆ ಒಳಿತು. ಇಲ್ಲಿ ಸೋಂಕಿರುವುದರಿಂದ ಆದಷ್ಟು ತಾಲ್ಲೂಕು ಕೇಂದ್ರಗಳಲ್ಲೇ ಗೊಬ್ಬರ, ಬೀಜ, ಪರಿಕರ ಕೊಳ್ಳಬೇಕು. ಕೃಷಿಕರಿಗೆ ಸಹಕಾರಿಯಾಗುವಂತೆ ದಾವಣಗೆರೆಯಲ್ಲಿ ಅಗ್ರಿ ವಾರ್ ರೂಂ ಮಾಡುವ ಚಿಂತನೆ ಮಾಡಲಾಗುತ್ತಿದ್ದು, ಇದರ ಮೂಲಕ ಕೃಷಿಕರ ಮನೆ ಬಾಗಿಲಿಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದ ವಸ್ತುಗಳನ್ನು ತಲುಪಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ಕಂಟೈನ್‍ಮೆಂಟ್ ಮತ್ತು ಬಫರ್ ಝೋನ್‍ಗಳಲ್ಲಿ ನಿರ್ಬಂಧಿಸಲಾಗುವುದು. ನಗರದಲ್ಲಿರುವ 10 ಚೆಕ್‍ಪೋಸ್ಟ್‍ಗಳು 24*7 ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲಿವೆ. ಯಾರೂ ಕೂಡ ಅನಾವಶ್ಯಕವಾಗಿ ಓಡಾಡಬಾರದು. ಒಂದು ಪಕ್ಷ ಓಡಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending