ದಿನದ ಸುದ್ದಿ
ದಾವಣಗೆರೆ | ಕೊರೋನಾ ಸಹಾಯವಾಣಿ ; ಸಾರ್ವಜನಿಕರು ಕರೆಮಾಡಿ ಮಾಹಿತಿ ಪಡೆಯಿರಿ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಚಿಗಟೇರಿ ಸಾರ್ವಜನಿಕ ಆಸ್ಪತ್ರೆ, ದೂರವಾಣಿ ಸಂಖ್ಯೆ: 08192-270015 ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ, ಸಿಜಿ ಆಸ್ಪತ್ರೆ ಆವರಣ 08192-297171 ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ತಿಳಿದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.